ನವದೆಹಲಿ: ಸಾಗರೋತ್ತರ ಭಾಗಗಳಲ್ಲಿರುವ ಭಾರತೀಯರು ಹಾಗೂ ಭಾರತೀಯರೊಂದಿಗಿನ ಸಂಬಂಧಗಳನ್ನು ಸುಧಾರಿಸುವ ಪ್ರಯತ್ನದೊಂದಿಗೆ 12 ವರ್ಷಗಳ ಬಳಿಕ ಭಾರತದ ಸಾಗರೋತ್ತರ ವ್ಯವಹಾರಗಳ ಸಚಿವಾಲಯವನ್ನು ವಿದೇಶಾಂಗ ಸಚಿವಾಲಯದ ಜೊತೆ ವಿಲೀನಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವ.
ಎರಡು ಸಚಿವಾಲಯಗಳ ನಡುವಿನ ಕಾರ್ಯಚಟುವಟಿಕೆಗಳ ಅತಿಕ್ರಮಣ ಹಾಗೂ ಭಾರತದ ಸಾಗರೋತ್ತರ ಕಾರ್ಮಿಕರ ವಿವಿಧ ದೂರುಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ನಿವಾರಿಸುವ ಗುರಿಯನ್ನು ಸರ್ಕಾರ ಹೊಂದಿದೆ.
ವಿದೇಶಾಂಗ ಸಚಿವಾಲದ ಆದೇಶದ ಮೂಲಕ ಸಾಗರೋತ್ತರ ಸಚಿವಾಲಯ ಕಾರ್ಯ ನಿರ್ವಹಿಸುತ್ತಿದ್ದು, ಈ ಎರಡು ಸಚಿವಾಲಗಳನ್ನು ವಿಲೀನಗೊಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಪ್ರಸ್ತಾಪಿಸಲಾಗಿದೆ ಎಂದು ವಿದೇಶಾಗ ಸಚಿವೆ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ.
ಸರ್ಕಾರದ ಮಧ್ಯಸ್ಥಿಕೆಯನ್ನು ಕಡಿಮೆಗೊಳಿಸಿ, ಸಚಿವಾಲದ ನೇರ ಆಡಳಿತ ಹೆಚ್ಚಿಸುವ ಉದ್ದೇಶದಿಂದ ಈ ಎರಡು ಸಚಿವಾಲಯಗಳನ್ನು ವಿಲೀನಗೊಳಿಸಲಿದೆ ಎಂದು ವಿದೇಶಾಂಗ ವ್ಯವಹಾರಗಳ ವಕ್ತಾರ ವಿಕಾಸ್ ಸ್ವರೂಪ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.