ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರವನ್ನು ನಿರ್ಮಿಸಲು ದೇಶದ 500 ಸಂಸದರ ಸಮ್ಮತಿ ಇದೆ ಎಂದು ವಿಎಚ್ಪಿ ಹೇಳಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿಎಚ್ಪಿಯ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಜೈನ್, ರಾಜಕೀಯ ಪಕ್ಷಗಳು ಬೇರೆಯಾಗಿರಬಹುದು ಆದರೆ 500 ಎಂಪಿಗಳು ರಾಮ ಮಂದಿರ ನಿರ್ಮಿಸುವ ನಿರ್ಧಾರಕ್ಕೆ ಸಮ್ಮತಿಸಿದ್ದಾರೆ. ಸಂಸತ್ತು ಈಗಲಾದರೂ ಈ ಬಗ್ಗೆ ನಿರ್ಣಯ ಕೈಗೊಳ್ಳಬೇಕು ಎಂದಿದ್ದಾರೆ.
ಜನರು ಇನ್ನಷ್ಟು ದಿನಗಳ ಕಾಲ ನ್ಯಾಯಾಲಯದ ತೀರ್ಪಿಗೆ ಕಾಯೋದಿಲ್ಲ, ಸಂಸತ್ತಿನಲ್ಲಿ ಈ ಬಗ್ಗೆ ಶೀಘ್ರದಲ್ಲೇ ಕಾಯ್ದೆ ಜಾರಿಗೊಳಿಸಬೇಕು ಎಂದಿದ್ದಾರೆ. ಕೆಲ ಸಂಸದರ ಪಟ್ಟಭದ್ರ ಹಿತಾಸಕ್ತಿಗಳಿಂದಾಗಿ ರಾಮಮಂದಿರದ ನಿರ್ಮಾಣ ಕಾರ್ಯ ವಿಳಂಬವಾಗುತ್ತಿದೆ ಎಂದು ಆರೋಪಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.