ನವದೆಹಲಿ: ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಸಲ್ಲಿಸಿದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ಗೆ 2 ಸಾವಿರ ಪುಟಗಳ ಲಿಖಿತ ಉತ್ತರ ನೀಡುವುದಾಗಿ ಎಎಪಿ ವಕ್ತಾರ ರಾಘವ್ ಚಡ್ಡಾ ತಿಳಿಸಿದ್ದಾರೆ.
ಜೇಟ್ಲಿಯವರು ದೆಹಲಿ ಕ್ರಿಕೆಟ್ ಸಂಸ್ಥೆಯಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಎಎಪಿ ಆರೋಪಿಸಿತ್ತು, ಆದರೆ ಈ ಆರೋಪವನ್ನು ಅಲ್ಲಗೆಳೆದ ಜೇಟ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಇತರ 5 ಎಎಪಿ ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಅಲ್ಲದೇ 10 ಕೋಟಿ ಪರಿಹಾರ ಕೇಳಿದ್ದರು.
ಅಷ್ಟೇ ಅಲ್ಲದೇ ದೆಹಲಿ ಕ್ರಿಕೆಟ್ ಸಂಸ್ಥೆ ಕೂಡ ಕೇಜ್ರಿವಾಲ್, ಎಎಪಿ ವಿರುದ್ಧ ಪ್ರತ್ಯೇಕ ಮಾನನಷ್ಟ ಮೊಕದ್ದಮೆ ದಾಖಲಿಸಿತ್ತು.
ಇದೀಗ ಜೇಟ್ಲಿ ಮೊಕದ್ದಮೆಗೆ 2 ಸಾವಿರ ಪುಟಗಳ ಲಿಖಿತ ಉತ್ತರ ಕೊಡುವುದಾಗಿ ಎಎಪಿ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.