ನವದೆಹಲಿ: ಯೋಧರಿಗೆ ಬುಲೆಟ್ ಪ್ರೂಫ್ ಜಾಕೆಟ್ಗಳನ್ನು ಒದಗಿಸುವ ಸಲುವಾಗಿ ರಕ್ಷಣಾ ಸಚಿವಾಲಯ ಎರಡು ಕಂಪನಿಗಳೊಂದಿಗೆ ಒಪ್ಪಂದ ಮಾಡಿಕೊಂಡಿದೆ.
ಟಾಟಾ ಅಡ್ವಾನ್ಸ್ಡ್ ಮೆಟಿರಿಯಲ್ಸ್ ಮತ್ತು ಎಂಕೆಯು ಎಂಬ ಎರಡು ಭಾರತೀಯ ಕಂಪನಿಗಳೊಂಡಿದೆ ರಕ್ಷಣಾ ಸಚಿವಾಲಯ ಒಪ್ಪಂದ ಮಾಡಿಕೊಂಡಿದೆ. ತಲಾ 25 ಸಾವಿರದಂತೆ ಎರಡು ಕಂಪನಿಗಳು ಒಟ್ಟು 50ಸಾವಿರ ಬುಲೆಟ್ ಪ್ರೂಫ್ ಜಾಕೆಟ್ಗಳನ್ನು ಒದಗಿಸಲಿದೆ.
ಯೋಧರಿಗೆ ಬುಲೆಟ್ ಪ್ರೂಫ್ ಜಾಕೆಟ್ಗಳನ್ನು ತಯಾರಿಸುವಂತೆ ಭಾರತೀಯ ಕಂಪನಿಗಳಿಗೆಯೇ ಸೂಚಿಸಿದ್ದು ಸರ್ಕಾರದ ಮೇಕ್ ಇನ್ ಇಂಡಿಯಾ ಯೋಜನೆಗೆ ಮತ್ತಷ್ಟು ಪ್ರೇರಣೆ ನೀಡಲಿದೆ.
ಒಪ್ಪಂದಕ್ಕೆ ಅಂತಿಮ ಮುದ್ರೆ ಶೀಘ್ರದಲ್ಲೇ ಬೀಳಲಿದೆ, ದರಗಳು ಕೂಡ ಇನ್ನಷ್ಟೇ ನಿಗಧಿಯಾಗಬೇಕಿದೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.