ನವದೆಹಲಿ: ಸಿಗರೇಟು ಅಥವಾ ಜಗಿಯುವ ತಂಬಾಕು ಪದಾರ್ಥಗಳನ್ನು ಅಪ್ರಾಪ್ತರಿಗೆ ಮಾರಾಟ ಮಾಡುವವರಿಗೆ 7 ವರ್ಷ ಜೈಲು ಮತ್ತು 1 ಲಕ್ಷ ರೂಪಾಯಿ ದಂಡವನ್ನು ವಿಧಿಸಲಾಗುತ್ತದೆ. ಈ ಕಾನೂನು ಇಂದಿನಿಂದಲೇ ಜಾರಿಯಾಗಲಿದೆ.
ಬಾಲನ್ಯಾಯ(ಮಕ್ಕಳ ಕಾಳಜಿ ಮತ್ತು ರಕ್ಷಣೆ) ಕಾಯ್ದೆ, 2015ನ್ನು ಕಳೆದ ತಿಂಗಳು ಸಂಸತ್ತಿನಲ್ಲಿ ಅಂಗೀಕಾರಗೊಳಿಸಲಾಗಿತ್ತು. ಈ ಮಸೂದೆ ಇಂದಿನಿಂದ ರಾಷ್ಟ್ರವ್ಯಾಪಿ ಜಾರಿಗೆ ಬರುತ್ತಿದೆ. ಈ ಕಾಯ್ದೆಯಲ್ಲಿ ಅಮಾನುಷ ಅಪರಾಧಗಳಲ್ಲಿ ಪಾಲ್ಗೊಂಡ 16-18ರ ನಡುವಿನ ವಯಸ್ಸಿನವರನ್ನು ವಯಸ್ಕರೆಂದು ಪರಿಗಣಿಸಿ ಶಿಕ್ಷೆಯನ್ನು ನೀಡಲಾಗುತ್ತದೆ.
ಧೂಮಪಾನ, ತಂಬಾಕಿನಂತಹ ದುಶ್ಚಟಗಳಿಂದ ಮಕ್ಕಳನ್ನು ದೂರವಿರಿಸಿ, ಮಕ್ಕಳಿಗೆ ಪಾನ್ ಮಸಾಲ, ಗುಟ್ಕಾ, ಸಿಗರೇಟು ಮಾರುವವರ ಮೂಗಿಗೆ ದಾರ ಹಾಕಲು ಸರ್ಕಾರ ಮುಂದಾಗಿದೆ. ಮಕ್ಕಳಿಗೆ ಇವುಗಳನ್ನು ಮಾರಾಟ ಮಾಡುವುದು ಈ ಕಾಯ್ದೆಯ ಅನ್ವಯ ಕ್ರಿಮಿನಲ್ ಅಪರಾಧ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.