ಸುಳ್ಯ : ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮರದ ದಿಮ್ಮಿಗಳನ್ನು ಸುಳ್ಯ ಅರಣ್ಯ ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಸುಳ್ಯ-ಪಾಣತ್ತೂರು ಅಂತಾರಾಜ್ಯ ರಸ್ತೆಯ ಮೂಲಕ ಈಚರ್ ಲಾರಿ ಮತ್ತು ಪಿಕ್ಅಫ್ನಲ್ಲಿ ಸಾಗಿಸಲಾಗುತ್ತಿದ್ದ ಒಂದು ಲಕ್ಷ ಕ್ಕೂ ಮಿಕ್ಕಿ ಬೆಲೆ ಬಾಳುವ ಹಲಸಿನ ಮರದ ದಿಮ್ಮಿ ಮತ್ತು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ವಾಹನದ ಚಾಲಕರಾದ ಉದಯಕುಮಾರ್ ಮತ್ತು ಸಂದೀಪ್ ಎಂಬವರನ್ನು ಬಂಧಿಸಿ ಕೇಸು ದಾಖಲಿಸಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಡಾ.ದಿನೇಶ್ಕುಮಾರ್ ಮಾರ್ಗದರ್ಶನದಲ್ಲಿ ವಲಯಅರಣ್ಯಾಧಿಕಾರಿ ಸುಬ್ಬಯ್ಯ ನೇತೃತ್ವದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಉಪ ವಲಯಾರಣ್ಯಾಧಿಕಾರಿಗಳಾದ ಯಶೋಧರ, ಯೋಗೀಶ್ , ಸಿಬ್ಬಂದಿಗಳಾದ ವಿನಾಯಕ್, ಜಯಪ್ರಕಾಶ್, ಸಂದೀಪ್, ಬಾಲಕೃಷ್ಣ, ಮನೋಹರ ಭಾಗವಹಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.