ನವದೆಹಲಿ: ದೇಶದಲ್ಲಿ ಮೊದಲ ಬಾರಿಗೆ ಇಂಟರ್ನೆಟ್ ಬಳಸುವ ಬಳಕೆದಾರರಿಗೆ ಎಲ್ಪಿಜಿ ಸಬ್ಸಿಡಿಯಂತೆ ಪ್ರಧಾನಿ ಸಚಿವಾಲಯವು ನಿರ್ದಿಷ್ಟ ಮೊತ್ತದ ಉಚಿತ ಮೊಬೈಲ್ ಇಂಟರ್ನೆಟ್ ಡಾಟಾ ಪ್ಯಾಕ್ ಒದಗಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಪ್ರಧಾನಿ ನರೇಂದ್ರ ಮೋದಿ ಅವರ ಡಿಜಿಟಲ್ ಇಂಡಿಯಾ ಯೋಜನೆಯ ಅಂಗವಾಗಿ ವಿವಿಧ ಇಂಟರ್ನೆಟ್ ದರಗಳ ಬಗ್ಗೆ ಪ್ರಧಾನಿ ಕಚೇರಿ ಚರ್ಚಿಸಲಿದ್ದು, ಇಂಟರ್ನೆಟ್ ಸಂಬಂಧಿತ ಕಾನೂನು ಕ್ರಮಗಳ ವಿಚಾಗಳ ಬಗ್ಗೆ ಮೇಲ್ವಿಚಾರಣೆ ನಡೆಸಿ ಈ ಉಪಕ್ರಮವನ್ನು ಜಾರಿಗೆ ತರಲಿದೆ ಎಂದು ತಿಳಿಸಿದೆ.
ಪ್ರಧಾನಿ ಕಚೇರಿ ರಾಜ್ಯ ಸಚಿವ ಜಿತೇಂದರ್ ಸಿಂಗ್ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ಹರ್ಷವರ್ಧನ್ ಅವರು ಂಪರ್ಕ ಹಾಗೂ ಐಟಿ ಸಚಿವ ರವಿಶಂಕರ್ ಪ್ರಸಾದ್ ಅವರನ್ನು ಭೇಟಿ ಮಾಡಿದ್ದು, ಇದರ ನೀತಿ ಹಾಗೂ ಪೂರೈಕೆ ಕುರಿತು ಮಾತುಕತೆ ನಡೆಸಲಿದ್ದಾರೆ ಎಂದು ವರದಿ ತಿಳಿಸಿದೆ.
ಬೆಲೆಗಳ ವ್ಯತ್ಯಯ, ಉಚಿತ ಪೂರೈಕೆ ಕಾರ್ಯಸೂಚಿಗಳ ಬಗ್ಗೆ ಸಭೆಯಲ್ಲಿ ಪ್ರಮುಖವಾಗಿ ಚರ್ಚಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಫೇಸ್ಬುಕ್ನ ಫ್ರೀ ಬೇಸಿಕ್ಸ್ ಕಾರ್ಯಸೂಚಿ ಈ ಹಿಂದೆ ಸಮಸ್ಯೆ ಎದುರುಸುದ್ದು, ಭಾರತದ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ ಇದನ್ನು ತಾತ್ಕಾಲಿಕವಾಗಿ ಮುಚ್ಚಲು ಸೂಚಿಸಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.