ಬಂಟ್ವಾಳ : ದ.ಕ. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗೆ ಕಾರ್ಯಕರ್ತರನ್ನು ಚುನಾವಣಾ ಕೆಲಸ ಕಾರ್ಯಗಳಲ್ಲಿ ತೊಡಗಿಸುವ ಸಲುವಾಗಿ ಕಾರ್ಯಕರ್ತರ ಬೃಹತ್ ಸಮಾವೇಶವು ಜ.22 ರಂದು ಶುಕ್ರವಾರ ಬೆಳಿಗ್ಗೆ ಗಂ. 10-30ಕ್ಕೆ ಪರಂಗಿಪೇಟೆ, ಯಶಸ್ವಿಹಾಲ್ನಲ್ಲಿ ಜರಗಲಿದೆ.
ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಎಸ್.ಸುರೇಶ್ ಕುಮಾರ್, ರಾಜ್ಯ ಉಪಾಧ್ಯಕ್ಷರುಗಳಾದ ವಿ.ಸುನೀಲ್ ಕುಮಾರ್, ಸುಲೋಚನಾ ಜಿ.ಕೆ.ಭಟ್, ಮಾನ್ಯ ಸಂಸದರುಗಳಾದ ನಳಿನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ, ವಿ.ಪ.ಪ್ರತಿಪಕ್ಷ ಸಚೇತಕರಾದ ಕ್ಯಾ|ಗಣೇಶ್ ಕಾರ್ಣಿಕ್, ಶಾಸಕ ಎಸ್.ಅಂಗಾರ, ವಿ.ಪ.ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ವಿ.ಪ.ಸದಸ್ಯ ಕೆ.ಮೋನಪ್ಪ ಭಂಡಾರಿ, ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್ ಹಾಗೂ ಇನ್ನಿತರ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಪಕ್ಷದ ಜನಪ್ರತಿನಿಧಿಗಳು, ಕಾರ್ಯಕರ್ತರು ಅತ್ಯಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಪ್ರತಿಕಾ ಪ್ರಕಟಣೆಯ ಮೂಲಕ ಕೋರಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.