ನವದೆಹಲಿ: ಹೈದರಾಬಾದ್ ವಿಶ್ವವಿದ್ಯಾನಿಲಯದ ದಲಿತ ಸಂಶೋಧನಾ ವಿದ್ಯಾರ್ಥಿಯ ಆತ್ಮಹತ್ಯೆ ಪ್ರಕರಣ ಭಾರೀ ಚರ್ಚೆ ಹುಟ್ಟು ಹಾಕಿದೆ, ದೇಶವ್ಯಾಪಿ ಪ್ರತಿಭಟನೆಗಳು ನಡೆಯುತ್ತಿವೆ. ರಾಜಕೀಯ ನಾಯಕರುಗಳು ಕೂಡ ಈ ಪ್ರಕರಣದಿಂದ ತಮ್ಮ ಬೇಳೆ ಬೇಯಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.
ಪರಿಸ್ಥಿತಿಯ ಗಂಭೀರತೆಯನ್ನು ಅರಿತಿರುವ ಎಚ್ಆರ್ಡಿ ಸಚಿವೆ ಸ್ಮೃತಿ ಇರಾನಿ ಅವರು, ದಲಿ ವಿದ್ಯಾರ್ಥಿ ರೋಹಿತ್ ವೆಮುಲಾ ಅವರ ಪ್ರಕರಣ ದಲಿತ ಮತ್ತು ದಲಿತೇತರರ ನಡುವಣ ಹೊಡೆದಾಟವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
‘ಹಲವಾರು ಮಂದಿ ಈ ಪ್ರಕರಣಕ್ಕೆ ಜಾತಿಯ ಬಣ್ಣ ಕಟ್ಟಲು ಪ್ರಯತ್ನಿಸುತ್ತಿದ್ದಾರೆ. ರೋಹಿತ್ ಡೆತ್ನೋಟ್ನಲ್ಲಿ ಯಾವುದೇ ವ್ಯಕ್ತಿ, ಸಂಸದ, ಸಂಸ್ಥೆಯ ಉಲ್ಲೇಖವಿಲ್ಲ. ವಿಶ್ವವಿದ್ಯಾನಿಲಯಕ್ಕೆ ಆಗಮಿಸುತ್ತಿರುವ ರಾಜಕಾರಣಿಗಳು ತಮ್ಮ ರಾಜಕೀಯ ಉದ್ದೇಶವನ್ನೇ ಇಟ್ಟುಕೊಂಡು ಬಂದಿದ್ದಾರೆ’ ಎಂದರು.
ಅಲ್ಲದೇ ಸರ್ಕಾರ ವಿಶ್ವವಿದ್ಯಾನಿಲಯದ ಮೆಲೆ ಯಾವ ರಿತಿಯ ಒತ್ತಡವನ್ನೂ ಹೇರಿಲ್ಲ, ನಾವು ಕೇವಲ ಪ್ರಕ್ರಿಯೆಯನ್ನು ಅನುಸರಿಸಿದ್ದೇವೆ ಎಂದಿದ್ದಾರೆ.
ಎಬಿವಿಪಿ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇರೆಗೆ ರೋಹಿತ್ ಸೇರಿದಂತೆ ನಾಲ್ವರು ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿತ್ತು. ಬಳಿಕ ರೋಹಿತ್ ಆತ್ಮಹತ್ಯೆ ಮಾಡಿಕೊಂಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.