ನವದೆಹಲಿ: ತಮಿಳುನಾಡಿನ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿಗಳನ್ನು ಆರಂಭಿಸುತ್ತಿದೆ. ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಬುಧವಾರ ತಮಿಳುನಾಡು ಕಾಂಗ್ರೆಸ್ ಮುಖಂಡರೊಂದಿಗೆ ಈ ಬಗ್ಗೆ ಚರ್ಚೆಯನ್ನೂ ನಡೆಸಿದ್ದಾರೆ.
ಡಿಎಂಕೆಯೊಂದಿಗೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುವ ಯೋಚನೆ ಕಾಂಗ್ರೆಸ್ನದ್ದು ಎನ್ನಲಾಗಿದೆ. ಲೋಕಸಭೆಯಲ್ಲಿ ಕಾಂಗ್ರೆಸ್ ತಮಿಳುನಾಡಿನಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿತ್ತು. ಕಳೆದ ವಿಧಾನಸಭೆಯಲ್ಲಿ ಡಿಎಂಕೆಯೊಂದಿಗೆ ಸ್ಪರ್ಧಿಸಿ ಕೇವಲ ಐದು ಸ್ಥಾನ ಪಡಯಲಷ್ಟೇ ಶಕ್ತವಾಗಿತ್ತು. ತಮಿಳುನಾಡಿನಲ್ಲಿ ಒಟ್ಟು 234 ವಿಧಾನಸಭಾ ಸ್ಥಾನಗಳಿವೆ.
ಡಿಎಂಕೆ ಸೇರಿದಂತೆ ಇತರ ಪಕ್ಷಗಳೊಂದಿಗೆ ಮೈತ್ರಿಮಾಡಿಕೊಳ್ಳುವ ನಿರ್ಧಾರದ ಬಗ್ಗೆ ತನ್ನ ನಿಲುವನ್ನು ಸ್ಪಷ್ಟಪಡಿಸಲು ತಮಿಳುನಾಡು ಕಾಂಗ್ರೆಸ್ ಘಟಕ ನಿರಾಕರಿಸಿದ್ದು, ಇದು ಹೈಕಮಾಂಡ್ಗೆ ಬಿಟ್ಟಿದೆ ಎಂದು ಮಾರ್ಮಿಕವಾಗಿ ಹೇಳಿದೆ.
ಕಳೆದ ತಿಂಗಳಷ್ಟೇ ಡಿಎಂಕೆ ಮುಖಂಡ ಕರುಣಾನಿಧಿಯವರು ಮೈತ್ರಿಗಾಗಿ ಕಾಂಗ್ರೆಸ್ಗೆ ಆಹ್ವಾನ ನೀಡುವುದಾಗಿ ಹೇಳಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.