ನವದೆಹಲಿ: ಗಣರಾಜ್ಯೋತ್ಸವದ ಸಂಭ್ರಮಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇದೆ. ಈ ಹಿನ್ನಲೆಯಲ್ಲಿ ರಾಷ್ಟ್ರ ರಾಜಧಾನಿ ಸೇರಿದಂತೆ ದೇಶದಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ. ಸೆಂಟ್ರಲ್ ಇಂಟೆಲಿಜೆನ್ಸಿ ಏಜೆನ್ಸಿ ಭದ್ರತೆಯ ಜವಾಬ್ದಾರಿಯನ್ನು ಹೊತ್ತುಕೊಂಡಿದೆ.
ಕ್ರಿಮಿನಲ್ ಚಟುವಟಿಕೆಗಳು ಹೆಚ್ಚಾಗಿರುವ ಗೋರೆಗಾಂವ್, ಫರಿದಾಬಾದ್ ಮುಂತಾದ ಪ್ರದೇಶಗಳ ಬಗ್ಗೆ ಅಪರಾಧ ವರದಿಗಳನ್ನು ಸಲ್ಲಿಸುವಂತೆ ಹರಿಯಾಣ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಈ ಎರಡೂ ಪ್ರದೇಶಗಳಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ.
ಮಹತ್ವದ ಬೆಳವಣಿಗೆಯೆಂಬಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ದೇಶದಾದ್ಯಂತದಿಂದ 14 ಜನ ಶಂಕಿತ ಭಯೋತ್ಪಾದಕರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇವರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಐಇಡಿಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಹಾನಗರಗಳಲ್ಲಿ, ಮಾಲ್, ಹೋಟೆಲ್ಗಳಲ್ಲಿ, ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಹದ್ದಿನ ಕಣ್ಗಾವಲು ಇರಿಸಲಾಗಿದೆ.
ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಫ್ರೆಂಚ್ ಅಧ್ಯಕ್ಷ ಫ್ರಾನ್ಸಿಸ್ಕೋ ಹೋಲ್ಯಾಂಡ್ ಆಗಮಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಫ್ರೆಂಚ್ ಪಡೆಗಳೂ ಭದ್ರತಾ ಕಾರ್ಯಕ್ಕೆ ಕೈಜೋಡಿಸಲಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.