ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಶನಿವಾರ ನೇತಾಜೀ ಸುಭಾಷ್ ಚಂದ್ರ ಬೋಸ್ ಅವರಿಗೆ ಸಂಬಂಧಪಟ್ಟ 100 ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ನೇತಾಜೀ ಅವರ 119ನೇ ಜನ್ಮ ದಿನದ ಪ್ರಯುಕ್ತ ದಾಖಲೆಗಳನ್ನು ಬಹಿರಂಗಪಡಿಸಲಾಗಿದೆ.
ರಾಷ್ಟ್ರ ರಾಜಧಾನಿಯಲ್ಲಿ ನೇತಾಜೀ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಬಳಿಕ ಅವರ ಕುಟುಂಬ ಸದಸ್ಯರ ಉಪಸ್ಥಿತಿಯಲ್ಲಿ ದಾಖಲೆಗಳ ಡಿಜಿಟಲ್ ಪ್ರತಿಯನ್ನು ಮೋದಿ ಸಾರ್ವಜನಿಕಗೊಳಿಸಿದರು.
ನೇತಾಜೀ ಅವರ ಕಣ್ಮರೆಗೆ ಸಂಬಂಧಿಸಿದ ಮಾಹಿತಿಗಳು ಇದರಲ್ಲಿ ಇವೆ ಎನ್ನಲಾಗಿದೆ. ಆದರೆ ಈ ದಾಖಲೆಗಳು ಅವರ ಸಾವಿನ ರಹಸ್ಯವನ್ನು ಬೇಧಿಸಲಾರವು ಎಂಬ ಬಗ್ಗೆಯೂ ಹಲವಾರು ಮಂದಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮೋದಿ ಕ್ರಮವನ್ನು ನೇತಾಜೀ ಕುಟುಂಬ ಸದಸ್ಯರು ಸ್ವಾಗತಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.