ನವದೆಹಲಿ: ಪಠಾನ್ಕೋಟ್ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ ವಿಚಾರಣೆಗೊಳಪಟ್ಟಿದ್ದ ಪಂಜಾಬ್ನ ಹಿರಿಯ ಪೊಲೀಸ್ ಅಧಿಕಾರಿ ಸಲ್ವಿಂದರ್ ಅವರಿಗೆ ಕ್ಲೀನ್ಚಿಟ್ ನೀಡಲಾಗಿದೆ.
ಸಲ್ವಿಂದರ್ ಅವರನ್ನು ಸುಳ್ಳು ಪತ್ತೆ ಪರೀಕ್ಷೆ, ವರ್ತನಾ ಪರೀಕ್ಷೆಗೆ ಒಳಪಡಿಸಿದ ಬಳಿಕ ಅವರ ವಿರುದ್ಧ ಯಾವುದೇ ಸಾಕ್ಷಿಗಳು ದೊರಕದ ಹಿನ್ನಲೆಯಲ್ಲಿ ಕ್ಲೀನ್ ಚಿಟ್ ನೀಡಲಾಗಿದೆ ಎನ್ನಲಾಗಿದೆ.
ಎಸ್ಪಿ ರ್ಯಾಂಕ್ ಅಧಿಕಾರಿಯಾಗಿರುವ ಸಲ್ವಿಂದರ್ ಅವರನ್ನು ಕಳೆದ ಎರಡು ವಾರಗಳಿಂದ ಹಲವಾರು ಬಾರಿ ವಿಚಾರಣೆಗೊಳಪಡಿಸಲಾಗಿದೆ. ಅವರ ನಿವಾಸ ಸೇರಿದಂತೆ ಹಲವಾರು ಕಡೆ ದಾಳಿಗಳನ್ನು ನಡೆಸಿ ಪರಿಶೀಲನೆಗಳನ್ನು ನಡೆಸಲಾಗಿದೆ.
ತಮ್ಮ ಕಾರನ್ನು ಉಗ್ರರು ಅಪಹರಿಸಿದ್ದರು ಎಂಬ ಸಲ್ವಿಂದರ್ ಹೇಳಿಕೆ ಭಾರೀ ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು. ಅಲ್ಲದೇ ಇವರಿಗೆ ಡ್ರಗ್ ರಾಕೆಟ್ ಜೊತೆ ಸಂಬಂಧ ಇರುವ ಬಗ್ಗೆಯೂ ಅನುಮಾನಗಳು ವ್ಯಕ್ತವಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.