ನವದೆಹಲಿ: ಅರುಣಾಚಲ ಪ್ರದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರುವ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಅದು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಬುಧವಾರ ನಡೆಯಲಿದೆ.
ರಾಷ್ಟ್ರಪತಿ ಆಡಳಿತ ವಿಧಿಸುವ ಕೇಂದ್ರದ ಶಿಫಾರಸ್ಸಿಗೆ ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರು ಮಂಗಳವಾರ ಸಮ್ಮತಿ ಸೂಚಿಸಿದ್ದಾರೆ. ಆದರೆ ಇದಕ್ಕೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಕಗ್ಗೊಲೆ ಎಂದಿದೆ.
‘ಸಂವಿಧಾನದ ಕಾಯ್ದೆ 356(1)ರ ಅನ್ವಯ ಭಾರತದ ರಾಷ್ಟ್ರಪತಿ ಸಹಿ ಹಾಕಿದ್ದಾರೆ, ಈ ಹಿನ್ನಲೆಯಲ್ಲಿ ಜ.26ಕ್ಕೆ ಅನ್ವಯವಾಗುವಂತೆ ಅರುಣಾಚಲ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತವನ್ನು ವಿಧಿಸಿ, ಅಲ್ಲಿನ ವಿಧಾನಸಭೆಯನ್ನು ಅಮಾನತಿನಲ್ಲಿ ಇಡಲಾಗುತ್ತದೆ’ ಎಂದು ಗೃಹಸಚಿವಾಲಯ ಹೇಳಿದೆ.
ಇದೀಗ ಸುಪ್ರೀಂ ಮೆಟ್ಟಿಲೇರಿರುವ ಕಾಂಗ್ರೆಸ್, ಅಲ್ಲಿ ಯಾವ ತೀರ್ಪು ಬರುತ್ತದೆ ಎಂಬುದನ್ನು ಕಾದು ನೋಡುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.