ಬೆಳ್ತಂಗಡಿ : ಯುವ ಜನಾಂಗವನ್ನು ಕೆಟ್ಟ ವ್ಯಸನಗಳಿಂದ ದೂರ ಮಾಡುವ ಕಾರ್ಯ ಆಗಬೇಕಾಗಿದೆ. ಸಶಕ್ತ ಯುವ ಭಾರತ ನಮ್ಮ ಗುರಿಯಾಗಬೇಕಾಗಿದೆ ಎಂದು ಡಾ| ಮಾತೆ ಮಾಹಾದೇವಿ ಹೇಳಿದ್ದಾರೆ.
ಅವರು ಮಂಗಳವಾರ ಧರ್ಮಸ್ಥಳ ಶಾಂತಿವನದಲ್ಲಿ 67ನೇ ಗಣರಾಜ್ಯೋತ್ಸವದ ಧ್ವಜಾರೋಹಣಗೈದು ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಭಾರತ ಯೋಗ ಮತ್ತು ಪ್ರಕೃತಿ ಚಿಕಿತ್ಸೆಯನ್ನು ಪ್ರಪಂಚಕ್ಕೆ ಕೊಡುಗೆಯಾಗಿ ನೀಡಿದೆ. ಇದು ಇಂದು ಪ್ರಪಂಚದಾದ್ಯಂತ ಅತ್ಯಂತ ಬೇಡಿಕೆಯ ಆರೋಗ್ಯ ವರ್ಧಕ ಚಿಕಿತ್ಸೆಯಾಗಿದೆ.
ಡಾ| ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳದಲ್ಲಿ ಯೋಗ ಮತ್ತು ಪ್ರಕೃತಿ ಚಿಕಿತ್ಸೆಯನ್ನು ಹುಟ್ಟುಹಾಕಿ ದೇಶೀ ಪದ್ಧತಿಯ ಪುನರುಜ್ಜೀವನಕ್ಕೆ ಕಾರಣಕರ್ತರಾಗಿದ್ದಾರೆ ಎಂದರು.
ಶಾಂತಿವನ ಟ್ರಸ್ಟ್ನ ಕಾರ್ಯದರ್ಶಿ ಬಿ. ಸೀತಾರಾಮ ತೋಳ್ಪಡಿತ್ತಾಯ, ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜಿನ ಪ್ರಾಚಾರ್ಯ, ಡಾ| ಪ್ರಶಾಂತ್ ಶೆಟ್ಟಿ ಉಪಸ್ಥಿತರಿದ್ದರು. ಡಾ| ಮೇಘಾ ಮೂರ್ತಿ ಕಾರ್ಯಕ್ರಮ ನಿರೂಪಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.