News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಶ್ರೀಗೋಪಾಲಕೃಷ್ಣ ದೇವಾಲಯದಲ್ಲಿ ವಿವಿಧ ಪೂಜೆ

Belthangady NEWSಬೆಳ್ತಂಗಡಿ : ನಾವೂರು ಶ್ರೀಗೋಪಾಲಕೃಷ್ಣ ದೇವರ ನೂತನ ಶಿಲಾಮಯ ದೇವಾಲಯದಲ್ಲಿ ಜ.26 ರಿಂದ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಮಹೋತ್ಸವ ನಡೆಯುತ್ತಿದ್ದು ಇಂದು (ಜ.27) ಬೆಳಿಗ್ಗೆ ತ್ರಿಕಾಲ ಪೂಜೆ, ಗಣಹೋಮ, ಅಂಕುರಪೂಜೆ, ಸ್ಥಳಶುದ್ದಿ, ಬಿಂಬಶುದ್ದಿ, ಕಲಶಪೂಜೆ, ಪ್ರಾಯಶ್ಚಿತ್ತ ಹೋಮ, ಮಹಾಪೂಜೆ ಸಂಜೆ ಕುಂಡಶುದ್ಧಿ, ತ್ರಿಕಾಲಪೂಜೆ, ಅಂಕುರಪೂಜೆ, ಅಕ್ಷತೆ ಹೋಮ, ಜಲಾಧಿವಾಸ, ರಾತ್ರಿ ಪೂಜೆ ನಡೆಯಲಿದೆ.

ಬೆಳಿಗ್ಗೆ ನಾವೂರು, ಇಂದಬೆಟ್ಟು ಹಾಗೂ ನಡ, ಕನ್ಯಾಡಿ ಗ್ರಾಮಸ್ಥರಿಂದ ಹಸಿರುವಾಣಿ ಸಮರ್ಪಣೆ ನಡೆಯಲಿದೆ. ಬಳಿಕ ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರ ವಾಸುದೇವರಾವ್ ಕಕ್ಕೆನೇಜಿ ಭಜನಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಸಂಜೆ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಚಿತ್ರದುರ್ಗ ಮಾದರ ಚೆನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಆಶೀರ್ವಚನ ನಡೆಯಲಿದೆ. ಅಧ್ಯಕ್ಷತೆಯನ್ನು ಶ್ರೀ ಧರ್ಮಸ್ಥಳ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಯಶೋವರ್ಮ ವಹಿಸಲಿದ್ದು ಕಟೀಲು ಶ್ರೀ ದುರ್ಗಾಪರಮೇಶ್ವರರೀ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಸೋಂದಾ ಭಾಸ್ಕರ ಭಟ್ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.

ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಸಂಜೆ ಗಂಟೆ 4 ಕ್ಕೆ ನಾವೂರು ಗ್ರಾಮದ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ, ಸುಳ್ಯೋಡಿ ಕಿರಿಯ ಪ್ರಾಥಮಿಕ ಶಾಲೆ ಮತ್ತು ನಾವೂರು ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ 9 ಗಂಟೆಯಿಂದ ವಿಷ್ಣು ಕಲಾವಿದರು ಮದ್ದಡ್ಕ ಇವರಿಂದ ಅನಂತ ಎಸ್. ಇರ್ವತ್ತಾಯ ತಂಗೊಯಿ ವಿರಚಿತ ಆ ನಾಗಮಚ್ಚೆ ಎಂಬ ತುಳು ಸಾಂಸಾರಿಕ ಭಕ್ತಿಪ್ರದಾನ ನಾಟಕ ಪ್ರದರ್ಶನ ಮಾಡಲಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top