News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಪತ್ರಕರ್ತರ ಕ್ರೀಡಾಕೂಟದ ಸಮಾರೋಪ : ಹಿರಿಯ ಪತ್ರಕರ್ತರಿಗೆ ಸನ್ಮಾನ

ಮಂಗಳೂರು : ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಪ್ರೆಸ್ ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್ ಇದರ ಆಶ್ರಯದಲ್ಲಿ ಮಂಗಳೂರು ನೆಹರೂ ಮೈದಾನದಲ್ಲಿ ನಡೆದ ಪತ್ರಕರ್ತರ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಪತ್ರಕರ್ತರನ್ನು ಸನ್ಮಾನಿಸಲಾಯಿತು.

manopra

ಹಿರಿಯ ಪತ್ರಕರ್ತ, ಉದಯವಾಣಿ ಪತ್ರಿಕೆಯ ಬ್ಯೂರೋ ಚೀಫ್ ಮನೋಹರ್ ಪ್ರಸಾದ್, ಚಾಲಿಪೋಲಿಲು ಚಿತ್ರದ ನಿರ್ಮಾಪಕ, ಜಯಕಿರಣ ಪತ್ರಿಕೆಯ ಮಾಲಕ ಪ್ರಕಾಶ್ ಪಾಂಡೇಶ್ವರ್ ಹಾಗೂ ಡೆಂಟಲ್ ಕೌನ್ಸಿಲ್ ಆಫ್ ಇಂಡಿಯಾ ಇದರ ಸದಸ್ಯ ಹಾಗೂ ನಮ್ಮ ಟಿ.ವಿ. ಚಾನೆಲ್‌ನ ಆಡಳಿತ ನಿರ್ದೇಶಕ ಡಾ. ಶಿವಶರಣ್ ಶೆಟ್ಟಿ ಇವರನ್ನು ಗೌರವಿಸಲಾಯಿತು.

01

ಸಮಾರಂಭದಲ್ಲಿ ನಗರ ಪೊಲೀಸ್ ಆಯುಕ್ತರಾದ ಚಂದ್ರಶೇಖರ್, ವಾರ್ತಾಧಿಕಾರಿ ಖಾದರ್ ಷಾ, ಮ.ನ.ಪಾ. ಆಯುಕ್ತ ಗೋಪಾಲಕೃಷ್ಣ, ಉದ್ಯಮಿ ಪುಷ್ಪರಾಜ್ ಜೈನ್, ಪತ್ರಕರ್ತರ ಸಂಘದ ಅಧ್ಯಕ್ಷ ಜಗನ್ನಾಥ್ ಶೆಟ್ಟಿ ಬಾಳ, ಟ್ರಸ್ಟ್ ನ ಅಧ್ಯಕ್ಷ ಆನಂದ ಶೆಟ್ಟಿ, ಪ್ರೆಸ್ ಕ್ಲಬ್ ಅಧ್ಯಕ್ಷ ರೊನಾಲ್ಡ್ ಅನಿಲ್ ಫೆರ್ನಾಂಡಿಸ್, ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ಇಂದಾಜೆ ಉಪಸ್ಥಿತರಿದ್ದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top