ಬೆಳ್ತಂಗಡಿ : ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಎಪ್ರಿಲ್ 29 ರಂದು ಸಂಜೆ ಗಂಟೆ 6-50 ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಸಾಮೂಹಿಕ ಉಚಿತ ವಿವಾಹ ನಡೆಯಲಿದೆ.
ವರದಕ್ಷಿಣೆ ಹಾಗೂ ವಿವಾಹಕ್ಕಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು 1972 ರಲ್ಲಿ ಉಚಿತ ಸಾಮೂಹಿಕ ವಿವಾಹ ಯೋಜನೆ ಆರಂಭಿಸಿದ್ದು, ಪ್ರತಿವರ್ಷ ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ ಏರ್ಪಡಿಸಲಾಗುತ್ತದೆ. ಕಳೆದ ವರ್ಷದ ವರೆಗೆ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹದಲ್ಲಿ 11,800 ಜೊತೆ ವಿವಾಹವಾಗಿದ್ದು, ಸುಖ-ಶಾಂತಿಯ ದಾಂಪತ್ಯ ಜೀವನ ನಡೆಸುತ್ತಿದ್ದಾರೆ.
ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ ಹಾಗೂ ಮಂಗಳಸೂತ್ರ ಕೊಡಲಾಗುವುದು. ಸಾಮೂಹಿಕ ವಿವಾಹದಲ್ಲಿ ವಿವಾಹವಾಗಲು ಇಚ್ಛಿಸುವವರು ಎಪ್ರಿಲ್ 25 ರ ಒಳಗೆ ಧರ್ಮಸ್ಥಳದಲ್ಲಿ ವಸಂತ ಮಹಲ್ (ಮಂಜಯ್ಯ ಹೆಗ್ಗಡೆ ಕಲಾಭವನ)ದ ಬಳಿ ಇರುವ ವಿವಾಹ ನೋಂದಣಿ ಕಚೇರಿಯಲ್ಲಿ ಹೆಸರು ದಾಖಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ 08256-277144 ಸಂಪರ್ಕಿಸಬಹುದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.