ನವದೆಹಲಿ: ಆಮ್ ಆದ್ಮಿ ಪಕ್ಷದ ಬಂಡಾಯ ನಾಯಕರುಗಳಾದ ಪ್ರಶಾಂತ್ ಭೂಷಣ್ ಮತ್ತು ಯೋಗೇಂದ್ರ ಯಾದವ್ ಅವರು ಮಂಗಳವಾರ ‘ಸ್ವರಾಜ್ ಸಂವಾದ’ ಸಭೆಯನ್ನು ಏರ್ಪಡಿಸಲಿದ್ದಾರೆ. ಭವಿಷ್ಯದಲ್ಲಿ ತೆಗೆದುಕೊಳ್ಳಬೇಕಾದ ನಿರ್ಧಾರಗಳ ಬಗ್ಗೆ ಇದರಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.
ವಿವಿಧ ರಾಜ್ಯಗಳ ಸಾವಿರಕ್ಕೂ ಅಧಿಕ ಕಾರ್ಯಕರ್ತರು ಇದರಲ್ಲಿ ಭಾಗವಹಿಸಲಿದ್ದಾರೆ. ಪಕ್ಷ ತಪ್ಪು ಹಾದಿಯಲ್ಲಿ ಸಾಗುತ್ತಿದೆಯೇ, ಅದನ್ನು ಸರಿಪಡಿಸಲು ಏನಾದರೂ ಕ್ರಮಕೈಗೊಳ್ಳುವ ಅಗತ್ಯವಿದೆಯೇ ಎಂಬುದನ್ನು ಚರ್ಚಿಸುವ ಸಲುವಾಗಿ ‘ಸ್ವರಾಜ್ ಸಂವಾದ್’ ಏರ್ಪಡಿಸಲಾಗಿದೆ ಎಂದು ಬಂಡಾಯ ನಾಯಕರುಗಳು ತಿಳಿಸಿದ್ದಾರೆ.
ಇದು ಎಎಪಿಯ ಅಧಿಕೃತ ಸಭೆಯಲ್ಲ ಎಂದಿರುವ ಅರವಿಂದ್ ಕೇಜ್ರಿವಾಲ್, ಈ ಸಭೆಯಲ್ಲಿ ಪಾಲ್ಗೊಳ್ಳುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳುವುದಾಗಿ ಎಚ್ಚರಿಕೆಯನ್ನೂ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.