ಬೆಳ್ತಂಗಡಿ : ಪ್ರತಿ ಭಾರಿ ತಾಲೂಕು ಕಚೇರಿಗೆ ಬಂದಾಗಲೂ ಸರ್ವೆ ಇಲಾಖೆಯ ಸಮಸ್ಯೆಗಳನ್ನೇ ಜನರು ತರುತ್ತಿದ್ದಾರೆ, ಸರ್ವೆ ಇಲಾಖೆಯವರು ಯಾಕೆ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಜಿಲ್ಲಾಧಿಕಾರಿ ಎ.ಬಿ ಇಬ್ರಾಹಿಂ ಅವರು ಸರ್ವೆ ಇಲಾಖೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಗುರುವಾರ ಜಿಲ್ಲಾಧಿಕಾರಿಯವರು ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು. ಮನವಿಯೊಂದಿಗೆ ಬಂದವರಲ್ಲಿ ಹೆಚ್ಚಿನವರು ಸರ್ವೆ ಇಲಾಖೆಗೆ ಸೇರಿದ ಸಮಸ್ಯೆಗಳನ್ನೇ ಮುಂದಿಟ್ಟರು. ಯಾವುದೇ ಅರ್ಜಿಗಳನ್ನು ನೀಡಿದರೂ ಅದು ಸರ್ವೆ ಇಲಾಖೆಯಲ್ಲಿ ವಿಲೇವಾರಿಯಾಗುತ್ತಿಲ್ಲ. ವರ್ಷ ಕಳೆದರೂ ಅಲ್ಲಿಯೇ ಉಳಿಸಿಕೊಳ್ಳುತ್ತಿದ್ದಾರೆ ಎಂದು ದೂರುಗಳು ಬಂದವು. ಈ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಜಿಲ್ಲಾಧಿಕಾರಿಯವರು ಸರ್ವೆ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಕರೆ ಮಾಡಿ ವಾರದೊಳಗೆ ಬೆಳ್ತಂಗಡಿ ಕಚೇರಿಗೆ ಬಂದು ಪರಿಶೀಲನೆ ನಡೆಸಿಉಳಿದುಕೊಂಡಿರುವ ಕಡತಗಳನ್ನು ವಿಲೇ ಮಾಡಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಕುಪ್ಪೆಟ್ಟಿ- ನೆಕ್ಕಿಲು-ಪಿಲಿಗೂಡು ಬೈಪಾಸ್ ರಸ್ತೆ ಡಾಮರೀಕರಣವಾಗದಿರುವುದನ್ನು ವಿರೋಧಿಸಿ ಮತದಾನ ಬಹಿಷ್ಕಾರ ಮಾಡುವುದಾಗಿ ಸ್ಥಳೀಯರು ಜಿಲ್ಲಾಧಿಕಾರಿಯವರ ಗಮನಕ್ಕೆ ತರಲಾಯಿತು. ಬೆಳ್ತಂಗಡಿ ಬಸ್ ನಿಲ್ದಾಣಕ್ಕೆ ತಾಗಿಕೊಂಡು ಅಕ್ರಮ ಕಟ್ಟಡವೊಂದು ರಚನೆಯಾಗಿರುವುದಾಗಿ ಬಿಜೆಪಿ ಮುಖಂಡ ರಾಘವ ಕಲ್ಮಂಜ ಹಾಗೂ ಇತರರು ದೂರು ನೀಡಿದರು. ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿಯವರು ತಿಳಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಪ್ರಸನ್ನಮೂರ್ತಿ ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.