ಸಿಡ್ನಿ: ನಿನ್ನೆ ಅಂತ್ಯಗೊಂಡ ಟಿ-20 ಸರಣಿಯಲ್ಲಿ ಭಾರತ ತಂಡ ಆಸ್ಟ್ರೇಲಿಯಾವನ್ನು ಕ್ಲೀನ್ ಸ್ವೀಪ್ ಮಾಡುವ ಮೂಲಕ ಟಿ-20 ಪಟ್ಟಿಯಲ್ಲಿ ನಂ.1 ಸ್ಥಾನಕ್ಕೆ ಲಗ್ಗೆ ಇಟ್ಟಿದೆ.
ಏಕದದಿನ ಕ್ರಿಕೆಟ್ನಲ್ಲಿ 1-4 ಅಂತರದ ಸೋಲು ಅನುಭವಿಸಿದ ಭಾರತ, ಟಿ-20 ಸರಣಿಯ 3 ಪಂದ್ಯಗಳಲ್ಲೂ ಉತ್ತಮ ಪ್ರದರ್ಶನ ತೋರಿ ಸರಣಿ ತನ್ನದಾಗಿಸಿದೆ.
ಇಲ್ಲಿನ ಸಿಡ್ನಿ ಕ್ರಿಕೆಟ್ ಗ್ರೌಂಡ್ನಲ್ಲಿ ಭಾನುವಾರ ನಡೆದ ಮೂರನೇ ಹಾಗೂ ಅಂತಿಮ ಟಿ-20 ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ನಿಗದಿತ 20 ಓವರ್ಗಳಲ್ಲಿ 5 ವಿಕೆಟ್ಗೆ 197 ರನ್ ಪೇರಿಸಿತು. ಆಸ್ಟ್ರೇಲಿಯಾ ಪರ ಕಪ್ತಾನ ಶೇನ್ ವಾಟ್ಸನ್ 124 ರನ್ ಬಾರಿಸಿದರು.
ಭಾರತದ ಪರ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿ ರೋಹಿತ್ ಶರ್ಮಾ(52) ಹಾಗೂ ವಿರಾಟ್ ಕೊಹ್ಲಿ(50) ಅವರ ಅರ್ಧಶತಕದ ನೆರವಿನಿಂದ ತಂಡ ಜಯಗಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು.
ಈ ಜಯದೊಂದಿಗೆ ಭಾರತ ತಂಡ ಟಿ-20 ಹಾಗೂ ಟೆಸ್ಟ್ ರ್ಯಾಂಕಿಂಗ್ನಲ್ಲಿ ಅಗ್ರ ಸ್ಥಾನ ಅಲಂಕರಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.