ಬೆಂಗಳೂರು: ಹಿಂಬದಿ ಸವಾರರಿಗೂ ಹೆಲ್ಮಟ್ ಕಡ್ಡಾಯ ನಿಯಮವು ರಾಜ್ಯಾದ್ಯಂತ ಫೆ. 1 ರಿಂದ ಜಾರಿಗೆ ಬಂದಿದೆ. ನಿಯಮ ಉಲ್ಲಂಘಿಸಿದವರಿಗೆ ದಂಡವನ್ನು ವಿಧಿಸಲಾಗುತ್ತದೆ.
ಸುಪ್ರೀಂ ಕೋರ್ಟ್ ಆದೇಶದಂತೆ ರಾಜ್ಯದೆಲ್ಲೆಡೆ ದ್ವಿಚಕ್ರ ವಾಹನದ ಹಿಂಬದಿ ಸವಾರರು ಹೆಲ್ಮೆಟ್ ಧರಿಸುವುದನ್ನು ಕಡ್ಡಾಯಗೊಳಿಸಿತ್ತು. ಇದು ಜನವರಿ 12 ರಿಂದಲೇ ಜಾರಿಗೆ ಬಂದಿತ್ತು. ನಿಯಮ ಉಲ್ಲಂಘನೆ ಮಾಡಿದವರಿಗೆ ಹಲವೆಡೆ ಜನವರಿ 21 ರಿಂದ ದಂಡವನ್ನೂ ಪೊಲೀಸರು ವಿಧಿಸುತ್ತಿದ್ದರು. ಆದರೆ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮೊದಲು ಆಗಬೇಕೆಂದು ಕೆಲ ದಿನಗಳ ಕಾಲ ದಂಡ ವಿಧಿಸುವುದನ್ನು ಮುಂದೂಡಿದ್ದರು.
ಆದರೆ ಫೆ. 1 ರಿಂದ ರಾಜ್ಯಾದ್ಯಂತ ಹೆಲ್ಮೆಟ್ ಕಡ್ಡಾಯವಾಗಿದ್ದು, ನಿಯಮವನ್ನು ಉಲ್ಲಂಘಿಸಿದವರಿಗೆ ದಂಡವನ್ನು ವಿಧಿಸಲಾಗುವುದು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.