ವಿಶಾಖಪಟ್ಟಣ : ಮೀಸಲಾತಿಗೆ ಸಂಬಂಧಿಸಿದಂತೆ ಆಂಧ್ರ ಪ್ರದೇಶದ ಗೋದಾವರಿ ಜಿಲ್ಲೆಯಲ್ಲಿ ಹಿಂಸಾತ್ಮಕ ಪ್ರತಿಭಟನೆ ನಡೆಸಿದ್ದ ಕಾಪು ಸಮುದಾಯ ಇದೀಗ ಕಾಪು ಪ್ರಮುಖರು ಹಾಗೂ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಆಶ್ವಾಸನೆಯ ಮೇರೆಗೆ ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ.
ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಕಾಪು ಸಮುದಾಯವನ್ನು ಸೇರಿಸಿ, ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಒದಗಿಸುವಂತೆ ಕಾಪು ಸಮುದಾಯದವರು ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದರು.
ಪ್ರತಿಭಟನೆಯು ಹಿಂಸಾರೂಪವನ್ನು ತಾಳಿದ್ದು, ಒಂದು ರೈಲಿನ ಬೋಗಿಗೆ ಬೆಂಕಿಯನ್ನೂ ಹಚ್ಚಿದ್ದರು.
ತದನಂತರ ಚಂದ್ರಬಾಬು ನಾಯ್ಡು ಮತ್ತು ಕಾಪು ಸಮುದಾಯದ ಪ್ರಮುಖರು ಮಾತುಕತೆಯಿಂದ ಪ್ರತಿಭಟನೆ ಹಿಂದಕ್ಕೆ ಪಡೆಯಲಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಚಂದ್ರಬಾಬು ನಾಯ್ಡು ಅವರು ಕಾಪು ಸಮುದಾಯಕ್ಕೆ ಮೀಸಲಾತಿಯನ್ನು ಒದಗಿಸುವುದಕ್ಕೆ ನಮ್ಮ ಸರ್ಕಾರವು ಬದ್ಧವಾಗಿದ್ದು, ಇದಕ್ಕಾಗಿ ಆಯೋಗವನ್ನು ರಚಿಸಲಾಗುವುದು. ಅಧಿಕಾರಿಗಳೊಂದಿಗೆ ಈ ಕುರಿತು ವಿಚಾರ ನಡೆಸುತ್ತೇನೆ. ಪ್ರತಿಭಟನೆಯಲ್ಲಿ ಸಾರ್ವಜನಿಕ ಆಸ್ತಿ ಪಾಸ್ತಿಗಳನ್ನು ಹಾನಿ ಮಾಡಿದವರನ್ನು ಶಿಕ್ಷಿಸಲಾಗುವುದು ಎಂದು ಹೇಳಿದ್ದಾರೆ.
ಪೂರ್ವ ಗೋದಾವರಿ ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಪುನರ್ ಸ್ಥಾಪನೆಯಾಗಿದ್ದು ಜನಜೀವನವು ಸಾಮಾನ್ಯ ಸ್ಥಿತಿಗೆ ಮರಳಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಆದರೆ ಕಾಪು ಸಮುದಾಯದವರು ಬೇಡಿಕೆಯನ್ನು ಶೀಘ್ರದಲ್ಲೇ ಈಡೇರಿಸದಿದ್ದರೆ ಪ್ರತಿಭಟನೆಯನ್ನು ಮತ್ತೊಮ್ಮೆ ಮಾಡಿ, ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.