ಭುವನೇಶ್ವರ: ರೈತ ನಾಯಕರ ಜೊತೆ ಮಾತುಕತೆ ನಡೆಸುವ ಮೂಲಕ ಅವರ ಸಮಸ್ಯೆಗಳನ್ನು ಅರಿಯುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬೃಹತ್ ’ಕಿಸಾನ್ ಸಮ್ಮೇಳನ್’ ನಡೆಸಲು ಬಿಜೆಪಿ ಮುಂದಾಗಿದೆ.
ದೇಶಾದ್ಯಂತ ಒಟ್ಟು 4 ಕಡೆಗಳಲ್ಲಿ ಸಮ್ಮೇಳನ ನಡೆಯಲಿದ್ದು, ಫೆ.18 ರಂದು ಮಧ್ಯಪ್ರದೇಶದ ಭೋಪಾಲ್, ಫೆ.21 ರಂದು ಒಡಿಶಾದ ಬಾರ್ಘಾ, ಫೆ.27 ರಂದು ಕರ್ನಾಟಕ ಮತ್ತು ಫೆ. 28 ರಂದು ಉತ್ತರಪ್ರದೇಶದಲ್ಲಿ ನಡೆಯುವ ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ.
ಕರ್ನಾಟಕ ಮತ್ತು ಉತ್ತರ ಪ್ರದೇಶದಲ್ಲಿ ನಡೆಯಲಿರುವ ಸಮ್ಮೇಳನದ ಸ್ಥಳ ಇನ್ನಷ್ಟೇ ನಿಗದಿಯಾಗಬೇಕಿದ್ದು, ಸಮ್ಮೇಳನದ ವೇಳೆ ರೈತರಿಗಾಗಿ ಕೇಂದ್ರ ಸರ್ಕಾರ ತಂದಿರುವ ಹಲವು ಯೋಜನೆಗಳಿಂದ ರೈತರಿಗೆ ಆಗಿರುವ, ಆಗುವ ಲಾಭಗಳ ಕುರಿತು ಮಾಹಿತಿ ಪಡೆಯಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.