ನವದೆಹಲಿ: ದೇಶದಲ್ಲಿ ಅಧಿಕವಾಗಿ ನಡೆಯುತ್ತಿರುವ ಹೆಣ್ಣು ಭ್ರೂಣಹತ್ಯೆಯನ್ನು ತಡೆಯುವ ಸಲುವಾಗಿ ಕೇಂದ್ರ ಸರ್ಕಾರ ಭ್ರೂಣ ಲಿಂಗ ಪತ್ತೆ ಪರೀಕ್ಷೆಯ ಮೇಲಿನ ನಿಷೇಧವನ್ನು ಹಿಂಪಡೆಯುವತ್ತ ಚಿಂತನೆ ನಡೆಸುತ್ತಿದೆ.
ಜೈಪುರದಲ್ಲಿ ನಡೆದ ಸಮಾರಂಭವೊಂದರಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಮೇನಕಾ ಗಾಂಧಿಯವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಹೆಣ್ಣು ಭ್ರೂಣವನ್ನು ಹತ್ಯೆ ಮಾಡುವ ಪೋಷಕರನ್ನು ಪತ್ತೆ ಹಚ್ಚುವ ವ್ಯವಸ್ಥೆಯೊಂದನ್ನು ರೂಪಿಸುವ ಬಗ್ಗೆ ಸಚಿವ ಸಂಪುಟ ಚರ್ಚೆ ನಡೆಸುತ್ತಿದೆ ಎಂದಿದ್ದಾರೆ.
ಗರ್ಭಿಣಿ ಮತ್ತು ಆಕೆಯ ಗರ್ಭದೊಳಗಿನ ಮಗುವನ್ನು ನೋಂದಾವಣೆ ಮಾಡುವ ಯೋಜನೆ ಇದಾಗಿದೆ, ಇದರಿಂದಾಗಿ ಗರ್ಭದೊಳಗಿನ ಮಗುವಿನ ಲಿಂಗ ಮತ್ತು ಗರ್ಭಪಾತ ಮಾಡಿಸಿಕೊಂಡವರನ್ನು ಸುಲಭವಾಗಿ ಪತ್ತೆ ಹಚ್ಚಬಹುದಾಗಿದೆ.
ಗರ್ಭಪಾತ ಮಾಡಿಸಿಕೊಂಡವರು ಅದಕ್ಕೆ ಕಾರಣವಾದ ಅಂಶಗಳ ಬಗ್ಗೆ ಮೆಡಿಕಲ್ ಸರ್ಟಿಫಿಕೇಟ್ನ್ನು ಸಲ್ಲಿಕೆ ಮಾಡುವುದು ಈ ನಿಯಮದಡಿ ಕಡ್ಡಾಯವಾಗಲಿದೆ.
1994ರಲ್ಲಿ ಬಂದ ಕಾನೂನು ಭ್ರೂಣ ಲಿಂಗ ಪತ್ತೆಯನ್ನು ಸಂಪೂರ್ಣವಾಗಿ ನಿಷೇಧಿಸಿತ್ತು.
2011ರ ಜನಗಣತಿಯ ಪ್ರಕಾರ ಭಾರತದಲ್ಲಿ 1000 ಪುರುಷರಿಗೆ 943 ಮಹಿಳೆಯರು ಮಾತ್ರ ಇದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಲಿಂಗಾನುಪಾತ ತಾರತಮ್ಯವನ್ನು ಹೋಗಲಾಡಿಸುವ ಭರವಸೆಯನ್ನು ನೀಡಿದ್ದು, ಹೆಣ್ಣು ಮಕ್ಕಳ ಉತ್ತೇಜನಕ್ಕಾಗಿ ’ಬೇಟಿ ಬಚಾವೋ, ಬೇಟಿ ಪಡಾವೋ’ ಆಂದೋಲನವನ್ನು ರೂಪಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.