ಬೆಂಗಳೂರು : ದೇವನಾಗರಿ ಲಿಪಿಯಲ್ಲಿ ಬರೆದಿರುವ ಕೊಂಕಣಿ ಸಾಹಿತ್ಯವನ್ನು ಮಾತ್ರ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿಗೆ ಪರಿಗಣಿಸಲು ಕೇಂದ್ರ ಸಾಹಿತ್ಯ ಅಕಾಡೆಮಿಗೆ ಹೈಕೋರ್ಟ್ ಅನುಮತಿ ನೀಡಿದೆ.
ಕೇಂದ್ರ ಸಾಹಿತ್ಯ ಅಕಾಡೆಮಿ ದೇವನಾಗರಿ ಲಿಪಿಯಲ್ಲಿರುವ ಸಾಹಿತ್ಯವನ್ನು ಹೊರತುಪಡಿಸಿ ಇತರ ಲಿಪಿಯಲ್ಲಿರುವ ಸಾಹಿತ್ಯವನ್ನು ಪರಿಗಣಿಸುವುದಿಲ್ಲ. ಒಂದು ಭಾಷೆ ಅನೇಕ ಲಿಪಿಗಳು ಎಂಬ ನೀತಿಯಿದ್ದರೂ, ದೇವನಾಗರಿ ಲಿಪಿಯಲ್ಲಿ ಬರೆದ ಸಾಹಿತ್ಯವನ್ನು ಪರಿಗಣಿಸುವುದು ಸೂಕ್ತ ಎಂದು ಅಖಿಲ ಭಾರತ ಕೊಂಕಣಿ ಪರಿಷತ್ ಸೊಸೈಟಿ ಹೈಕೋರ್ಟ್ಗೆ ಹೇಳಿಕೆ ನೀಡಿದೆ.
ಅಖಿಲ ಭಾರತ ಕೊಂಕಣಿ ಪರಿಷತ್ ಸೊಸೈಟಿ ಹೈಕೋರ್ಟ್ಗೆ ನೀಡಿದ ಹೇಳಿಕೆಯ ಮೇರೆಗೆ ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಮತ್ತು ನ್ಯಾ.ರವಿ ಮಳೀಮಠ ಅವರಿದ್ದ ವಿಭಾಗೀಯ ಪೀಠ ಕನ್ನಡ, ಮಲಯಾಳ, ಇಂಗ್ಲಿಷ್ (ರೋಮನ್) ಮತ್ತು ಅರೇಬಿಕ್ ಲಿಪಿಯಲ್ಲಿರುವ ಸಾಹಿತ್ಯವನ್ನು ದೇವನಾಗರಿ ಲಿಪಿಗೆ ಅನುವಾದ ಮಾಡಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು ಆದರೆ ಅದನ್ನು ಪರಿಗಣಿಸಬೇಕೋ ಬೇಡವೋ ಎನ್ನುವುದು ಆಯ್ಕೆ ಸಮಿತಿಗೆ ಬಿಟ್ಟ ವಿಚಾರ ಎಂದು ಹೇಳಿದೆ.
ವಿವಿಧ ಲಿಪಿಯಲ್ಲಿರುವ ಕೊಂಕಣಿ ಸಾಹಿತ್ಯಗಳನ್ನು ಪಶಸ್ತಿಗೆ ಪರಿಗಣಿಸುವಂತೆ ಎರಿಕ್ ಓಝಾರಿಯೋ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಅದನ್ನು ಹೈಕೋರ್ಟ್ ವಜಾಗೊಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.