ಮುಂಬಯಿ: ಮೇಕ್ ಇನ್ ಇಂಡಿಯಾ ಹೂಡಿಕೆದಾರರ ಬೃಹತ್ ಸಮಾವೇಶದ ಆತಿಥ್ಯ ವಹಿಸಲಿರುವ ಮಹಾರಾಷ್ಟ್ರ ಸರ್ಕಾರಕ್ಕೆ ಮುಂಬಯಿಯ ಚೌಪಾಟಿ ಬೀಚ್ನ್ನು ಬಳಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಮೇಕ್ ಇನ್ ಇಂಡಿಯಾ ಕಾರ್ಯಕ್ರಮಕ್ಕೆ ಮುಂಬಯಿಯನ್ನು ಸಾಂಸ್ಕೃತಿಕ ಮತ್ತು ಆರ್ಥಿಕ ಶಕ್ತಿಯಾಗಿ ಬಳಸಲಾಗುತ್ತಿದ್ದು, ಇದನ್ನು ಫೆ. 13 ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ.
ಪರಿಸರ ಸಂಬಂಧಿ ಕಾರಣಗಳಿಂದಾಗಿ ಈ ಬೀಚ್ನ್ನು ಕಾರ್ಯಕ್ರಮ ನಡೆಸಲು ಬಳಸಬಾರದು ಎಂದು ಬಾಂಬೆ ಹೈಕೋರ್ಟ್ ಸೂಚಿಸಿತ್ತು. ಆದರೆ ಸುಪ್ರೀಂ ಕೋರ್ಟ್ ಈ ನಿರ್ಧಾರವನ್ನು ತಳ್ಳಿ ಹಾಕಿದೆ.
ಜಗತ್ತಿನ 56 ದೇಶಗಳ 10,000 ಜನಪ್ರತಿನಿಧಿಗಳು ಮತ್ತು ನಾಯಕರು ಈ ಸಭೆಯಲ್ಲಿ ಭಾಗವಹಿಸಲಿದ್ದು, ಪರಿಸರ ಮಾಲಿನ್ಯ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ.
ಬಾಲಿವುಡ್ನ ಪ್ರಸಿದ್ಧ ಕಲಾ ನಿರ್ದೇಶಕ ನಿತಿನ್ ದೇಸಾಯಿ ಅವರನ್ನು ಕಾರ್ಯಕ್ರಮದ ಕ್ರಿಯೇಟಿವ್ ಡೈರೆಕ್ಟರ್ ಆಗಿ ನೇಮಿಸಲಾಗಿದೆ. ಅದ್ದೂರಿ ಸುಡುಮದ್ದು ಪ್ರದರ್ಶನ ಮತ್ತು ಲೇಸರ್ ಪ್ರದರ್ಶನವನ್ನೂ ಏರ್ಪಡಿಸಲಾಗಿದೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.