ನವದೆಹಲಿ: ಭಾರತವನ್ನು ಸ್ವಚ್ಛಗೊಳಿಸುವ ಗುರಿಯನ್ನು ಸಾಧಿಸುವುದಕ್ಕಾಗಿ ಶಾಲೆಗಳಲ್ಲಿ ಸ್ವಚ್ಛತಾ ಗೀತೆಯನ್ನು ಪರಿಚಯಿಸಲು ಮಾನವ ಸಂಪನ್ಮೂಲ ಸಚಿವಾಲಯ ನಿರ್ಧರಿಸಿದೆ.
ಬೆಳಗ್ಗಿನ ಅಸೆಂಬ್ಲಿ ಅಥವಾ ಮಧ್ಯಾಹ್ನದ ಊಟದ ವಿರಾಮದ ವೇಳೆ ಈ ಗೀತೆಯನ್ನು ಮಕ್ಕಳಿಂದ ಹಾಡಿಸುವ ಯೋಜನೆ ಇದಾಗಿದೆ. ಇದರಿಂದ ಮಕ್ಕಳಿಗೆ ಸ್ವಚ್ಛತೆಯ ಅರಿವು ಎಳವೆಯಲ್ಲಿಯೇ ಮೂಡುತ್ತದೆ. ಭವಿಷ್ಯದಲ್ಲಿ ಭಾರತ ಸ್ವಚ್ಛ ಮತ್ತು ಸುಂದರವಾಗುತ್ತದೆ ಎಂಬ ವಿಶ್ವಾಸದಿಂದ ಗೀತೆಯನ್ನು ಪರಿಚಯಿಸಲಾಗುತ್ತಿದೆ.
ಅಲ್ಲದೇ ವಾರದ ಮೊದಲ ದಿನವನ್ನು ಸ್ವಚ್ಛತಾ ದಿನವನ್ನಾಗಿ ಆಚರಿಸಬೇಕು, ಈ ದಿನ ಮಕ್ಕಳು ತಮ್ಮ ಸುತ್ತಮುತ್ತಲ ಆವರಣವನ್ನು ಸ್ವಚ್ಛಗೊಳಿಸುವ ಕಾಯಕ ಮಾಡಬೇಕಿದೆ. ಸಚಿವಾಲಯ ಈ ಯೋಜನೆ ಜಾರಿಗೆ 3 ತಿಂಗಳುಗಳ ಟಾರ್ಗೆಟ್ ರೂಪಿಸಿದೆ.
2019ರಷ್ಟರೊಳಗೆ ಭಾರತವನ್ನು ಬಯಲು ಶೌಚ ಮುಕ್ತಗೊಳಿಸಬೇಕು ಮತ್ತು ಸ್ವಚ್ಛಗೊಳಿಸಬೇಕು ಎಂಬ ಗುರಿ ಸರ್ಕಾರದ್ದು. ಈ ಹಿನ್ನಲೆಯಲ್ಲಿ ಸ್ವಚ್ಛ ಭಾರತ ಅಭಿಯಾನವನ್ನು ಯಶಸ್ವಿಗೊಳಿಸಲು ಶಾಲಾ ಮಕ್ಕಳನ್ನು, ಕಾಲೇಜು ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.