ಬೆಂಗಳೂರು: ಬಂಡವಾಳ ಹೂಡಿಕೆಗೆ ಜಾಗತಿಕ ಹೂಡಿಕೆದಾರರ ಸಮಾವೇಶ ’ಇನ್ವೆಸ್ಟ್ ಕರ್ನಾಟಕ-2016’ಕ್ಕೆ ಹಣಕಾಸು ಸಚಿವ ಅರುಣ್ ಜೇಟ್ಲಿ ಚಾಲನೆ ನೀಡಿದ್ದಾರೆ.
ಇಲ್ಲಿನ ಅರಮನೆ ಮೈದಾನದಲ್ಲಿ ಸಮಾವೇಶ ಉದ್ಘಾಟಿಸಿದ ಅವರು, ಕೇಂದ್ರ ಸರ್ಕಾರ ರಾಜ್ಯಕ್ಕೆ ಎಲ್ಲ ರೀತಿಯ ನೆರವು ನೀಡಲಿದೆ ಎಂದು ಹೇಳಿದ್ದಾರೆ. ಉದ್ಯಮ ಸ್ನೇಹಿ ವಾತಾವರಣ, ನೀತಿ-ನಿಯಮಗಳು ಇದ್ದಲ್ಲಿ ಹೂಡಿಕೆದಾರರು ಬಂಡವಾಳ ಹೂಡಿಕೆ ಮಾಡುತ್ತಾರೆ ಎಂದು ಅವರು ಹೇಳಿದರು.
ಮೂರು ದಿನಗಳ ಕಾಲ ನಡೆಯಲಿರುವ ಈ ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಉದ್ಯಮಿಗಳಾದ ರತನ್ ಟಾಟಾ, ಅನಿಲ್ ಅಂಬಾನಿ, ಅಜೀಮ್ ಪ್ರೇಮ್ಜಿ, ಕಿರಣ್ ಮಜುಂದಾರ್ ಶಾ ಮುಂತಾದವರು ಭಾಗವಹಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.