ಕಾರ್ಕಳ: ತಾಲೂಕಿನ ಮುಂಡ್ಕೂರು ಗ್ರಾಮ ಪಂಚಾಯತ್ ಅಧ್ಯಕ್ಷ ಜಾತ್ಯಾತೀತ ಜನತಾದಳದ ಯುವ ಧುರೀಣ, ಮುಂಡ್ಕೂರು ಸತ್ಯಶಂಕರ ಶೆಟ್ಟಿ ತಮ್ಮ ನೂರಾರು ಬೆಂಬಲಿಗರೊಂದಿಗೆ ಜೆ.ಡಿ.ಎಸ್ ತೊರೆದು, ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡರು.
ಕಾರ್ಕಳ ಬಿ.ಜೆ.ಪಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಪಕ್ಷದ ಕ್ಷೇತ್ರಾಧ್ಯಕ್ಷರಾದ ಮಣಿರಾಜ್ ಶೆಟ್ಟಿ ಜಿಲ್ಲಾ ಉಪಾಧ್ಯಕ್ಷರಾದ ಬೋಳ ಸದಾಶಿವ ಶೆಟ್ಟಿ, ಜಯರಾಮ್ ಸಾಲ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ ಮಹಾವೀರ ಹೆಗ್ಡೆಯವರ ಸಮ್ಮುಖದಲ್ಲಿ ಬಿ.ಜೆ.ಪಿಗೆ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಮೋಹಿನಿ ಶ್ರೀಧರ ಗೌಡ, ಲಲಿತ, ಸುಶೀಲ, ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ಕೃಷ್ಣ ಶೆಟ್ಟಿ, ನಾಗರಾಜ್ ಮೂಲ್ಯ ಮೊದಲಾದ ಜೆ.ಡಿ.ಎಸ್ ಕಾರ್ಯಕರ್ತರು ಬಿ.ಜೆ.ಪಿ ಪಕ್ಷಕ್ಕೆ ಸೇರ್ಪಡೆಯಾದರು.
ಕ್ಷೇತ್ರದ ಶಾಸಕರಾದ ವಿ.ಸುನಿಲ್ ಕುಮಾರ್ ಅವರ ಆಶಯದಂತೆ ಕ್ಷೇತ್ರಾಧ್ಯಕ್ಷರಾದ ಮಣಿರಾಜ್ ಶೆಟ್ಟಿಯವರು ಪಕ್ಷದ ದ್ವಜವನ್ನು ನೀಡಿ ಶಾಲನ್ನು ಹೊದಿಸಿ ಅಭಿನಂದಿಸುವ ಮೂಲಕ ಪಕ್ಷದ ಸೇರ್ಪಡೆಗೆ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.
ಮುಂಡ್ಕೂರು ಗ್ರಾಮ ಪಂಚಾಯತ್ ಪಕ್ಷದ ಪ್ರಮುಖರಾದ ರವಿ ಶೆಟ್ಟಿ, ಭಾಸ್ಕರ್ ಶೆಟ್ಟಿ, ಕರಿಯಣ್ಣ ಪೂಜಾರಿ, ಅಶೋಕ ಶೆಟ್ಟಿ ಮೊದಲಾದವರು ವೇದಿಕೆಯಲ್ಲಿದ್ದು, ಸಹಕರಿಸಿದರು. ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ರವೀಂದ್ರ ಕುಮಾರ್ ಸ್ವಾಗತಿಸಿ ಕಾರ್ಯ ಕ್ರಮ ನಿರೂಪಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.