ನವದೆಹಲಿ: ಭಾರತದ ನಗರ ಪ್ರದೇಶಗಳಲ್ಲಿ ಪ್ಲಾಸ್ಟಿಕ್ ವಿಲೇವಾರಿ ಸಮಸ್ಯೆ ಹೆಚ್ಚುತ್ತಿದ್ದು, ಇದನ್ನು ನಿವಾರಿಸಲು ರಸ್ತೆ ಅಭಿವೃದ್ಧಿಕಾರರು ಪ್ಲಾಸ್ಟಿಕ್ ತ್ಯಾಜ್ಯ ಬಳಕೆಯನ್ನು ಸರ್ಕಾರ ಕಡ್ಡಾಯಗೊಳಿಸಿದೆ.
5 ಲಕ್ಷಕ್ಕೂ ಅಧಿಕ ಜನಸಂಖ್ಯೆ ಇರುವ ನಗರ ಪ್ರದೇಶಗಳಲ್ಲಿ ಪ್ರತಿ 50 ಕಿ.ಮಿ. ವ್ಯಾಪ್ತಿಯ ರಸ್ತೆ ನಿರ್ಮಾಣಕ್ಕೆ ಡಾಂಬರು, ಜಲ್ಲಿ ಮಿಶ್ರಣದೊಂದಿಗೆ ತ್ಯಾಜ್ಯ ಪ್ಲಾಸ್ಟಿಕ್ ಬಳಸಬೇಕಿದೆ. ಇತ್ತೀಚೆಗೆ ರಸ್ತೆ ನಿರ್ಮಾಣ ಮಾರ್ಗಸೂಚಿ ಬಿಡುಗಡಡೆ ಮಾಡಲಾಗಿದ್ದು, ಪ್ಲಾಸ್ಟಿಕ್ ತ್ಯಾಜ್ಯ ದೊರಕದೇ ಇದ್ದಲ್ಲಿ ರಸ್ತೆ ಅಭಿವೃದ್ಧಿಕಾರರು ಡಾಂಬರು ರಸ್ತೆ ನಿರ್ಮಾಣಕ್ಕೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಅನುಮತಿ ಪಡೆಯಬೇಕು ಎಂದು ಸರ್ಕಾರ ತಿಳಿಸಿದೆ.
ನಗರ ಸ್ಥಳೀಯ ಸಂಸ್ಥೆಗಳು ಪ್ಲಾಸ್ಟಿಕ್ ತ್ಯಾಜ್ಯಗಳನ್ನು ರಸ್ತೆ ಅಭಿವೃದ್ಧಿಕಾರರಿಗೆ ಮಾರಾಟ ಮಾಡಬಹುದು. ಅವರು ರಸ್ತೆ ನಿರ್ಮಾಣ ಕಂಪೆನಿಗಳೊಂದಿಗೆ ಮನವಿ ಪತ್ರಗಳಿಗೆ ಒಪ್ಪಂದ ನಡೆಸಬಹುದು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭಾರತ ವಾರ್ಷಿಕ 56 ಲಕ್ಷ ಪ್ಲಾಸ್ಟಿಕ್ ತ್ಯಾಜ್ಯ ಉತ್ಪಾದಿಸುತ್ತಿದೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ನಡೆಸಿದ ಅಧ್ಯಯನದ ಪ್ರಕಾರ ಭಾರತದ 60 ಬೃಹತ್ ನಗರಗಳು ಪ್ರತಿ ನಿತ್ಯ 15,000 ಟನ್ ಪ್ಲಾಸ್ಟಿಕ್ ತ್ಯಾಜ್ಯ ಉತ್ಪಾದಿಸುತ್ತಿವೆ. ದೆಹಲಿಯೊಂದರಲ್ಲೇ ಪ್ರತಿ ದಿನ 7,000 ಟನ್ ತ್ಯಾಜ್ಯ ಉತ್ಪಾದನೆಯಾಗುತ್ತಿದೆ.
ಆಲ ನಿರೋಧಕವಾಗಿರುವ ಪ್ಲಾಸ್ಟಿಕ್ ಡಾಂಬರು ರಸ್ತೆಗಳ ಸುದೀರ್ಘ ಬಾಳ್ವಿಕೆಗೆ ಹೆಚ್ಚು ಪರಿಣಾಮಕಾರಿಯಾಗಿಸದೆ ಎಂದು ಹೇಳಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.