ನವದೆಹಲಿ: ದೇಶದಲ್ಲಿ ಹಲವೆಡೆ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದ ಮದರಸಾ ಮಾಲೀಕನ್ನು ರಾಷ್ಟ್ರೀಯ ತನಿಖಾ ದಳ ಸಿಬ್ಬಂದಿಗಳು ಬಂಧಿಸಿದ್ದಾರೆ. ಈತನನ್ನು ಉತ್ತರ ಪ್ರದೇಶದ ಹರ್ದೋಯಿ ಜಿಲ್ಲೆಯ ಸೀಲಂಪುರ ನಿವಾಸಿ ಅಬ್ದಸ್ ಸಮಿ ಕಾಸ್ಮಿ ಎಂದು ಗುರುತಿಸಲಾಗಿದೆ.
ಆತನ್ನು ಭಯೋತ್ಪಾದಕ ಸಂಘಟನೆ ರೂಪಿಸುವ ಮತ್ತು ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸುತ್ತಿರುವ ಹಿನ್ನೆಲೆಯಲ್ಲಿ ತನಿಖೆಯ ಭಾಗವಾಗಿ ಬಂಧಿಸಲಾಗಿದೆ ಎಂದುರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ತಿಳಿಸಿದ್ದಾರೆ.
ಅಬ್ದಸ್ನು ಖಲೀಫಾ ಬೆಂಬಲಿಸುವ ಪ್ರಚೋದನಕಾರಿ ಭಾಷಣ ಮಾಡುತ್ತಿದ್ದು, ತಾನು ರಚಿಸಿರುವ ಹಲವು ವೆಬ್ಸೈಟ್ಗಳಲ್ಲಿ ಅದರ ವೀಡಿಯೋಗಳನ್ನು ಅಪ್ಲೋಡ್ ಮಾಡುತ್ತಿದ್ದ. ರಾಷ್ಟ್ರ ವಿರೋಧಿ ಚಟುವಟಿಕೆಗಳಿಗೆ ಯುವಕರನ್ನು ಪ್ರೇರೇಪಿಸುವಂತಹ ಭಾಷಣ ಮತ್ತು ಹೇಳಿಕೆಗಳನ್ನು ನೀಡುತ್ತಿದ್ದ ಅಬ್ದಸ್ ಸಮಿ ತನ್ನದೇ ಆದ ಟ್ರಸ್ಟ್ ಮತ್ತು ಮದರಸಾಗಳನ್ನು ಹೊಂದಿದ್ದಾನೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಈ ಹಿಂದೆಯೂ ಆತನ ವಿರುದ್ಧ ತನಿಖಾ ದಳದ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.