ನವದೆಹಲಿ: 7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಕಾರ್ಯರೂಪಕ್ಕೆ ತರಲು ಮತ್ತು ಏಕ ಶ್ರೇಣಿ ಏಕ ಪಿಂಚಣಿ ಯೋಜನೆಗಾಗಿ 2016-17 ರ ಹಣಕಾಸು ವರ್ಷದಲ್ಲಿ 1.10 ಲಕ್ಷ ಕೋಟಿಗಳನ್ನು ಎತ್ತಿಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಇದಕ್ಕಾಗಿ ಕೇಂದ್ರ ಸರ್ಕಾರ ಪ್ರಕ್ರಿಯೆಗಳನ್ನು ಮಾಡಲಿದೆ ಎಂದಿದ್ದಾರೆ.
ಐಎಂಎಫ್ ಸೇರಿದಂತೆ ಎಲ್ಲಾ ಪ್ರಮುಖ ಆರ್ಥಿಕ ಸಂಸ್ಥೆಗಳು ಮುಂಬರುವ ವರ್ಷದಲ್ಲಿ ವಿಶ್ವ ಆರ್ಥಿಕತೆ ಅತೀ ಕಳಪೆ ಪ್ರಗತಿ ಸಾಧಿಸಲಿವೆ ಎಂದು ಭವಿಷ್ಯ ನುಡಿದಿವೆ. ಈ ಬೆಳವಣಿಗೆಯಿಂದ ಭಾರತದ ರಫ್ತಿನ ಮೇಲೆ ಪ್ರಭಾವ ಬೀರುವುದರಿಂದ ನಮಗೂ ತೊಂದರೆಯಾಗಲಿದೆ ಎಂದು ಜೇಟ್ಲಿ ಅಭಿಪ್ರಾಯಪಟ್ಟಿದ್ದಾರೆ.
ಮಳೆಯ ಕೊರತೆಯಿಂದಾಗಿ ಕಳೆದ ಎರಡು ವರ್ಷದಲ್ಲಿ ಕೃಷಿ ಪ್ರಗತಿ ಸಾಕಷ್ಟು ನಷ್ಟ ಅನುಭವಿಸಿದೆ, 2015-16 ರ ಸಾಲಿನಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಬರ ಪರಿಹಾರ ಮೊತ್ತವನ್ನು ರಾಜ್ಯಗಳಿಗೆ ನೀಡಲಾಗಿದೆ. ಕೃಷಿ ಉತ್ಪನ್ನ ಹೆಚ್ಚಿಸಲು ಸಹಕಾರವನ್ನೂ ನೀಡಲಾಗಿದೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.