ನವದೆಹಲಿ: ಬೆಂಗಳೂರಿನಲ್ಲಿ 10 ದಿನಗಳ ಕಾಲ ನ್ಯಾಚುರೋಪಥಿ ಚಿಕಿತ್ಸೆ ಪಡೆಯುತ್ತಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಭಾನುವಾರ ದೆಹಲಿಗೆ ಹಿಂದಿರುಗಿದ್ದಾರೆ.
ದೆಹಲಿಗೆ ತಲುಪಿದ ಒಂದು ಗಂಟೆಯೊಳಗೆ ಸಚಿವರೊಂದಿಗೆ ಸಮಾಲೋಚನೆ ನಡೆಸಿದ ಅವರು, ಎಂಸಿಡಿ ಸ್ವಚ್ಛತಾ ಕೆಲಸಗಾರರ ಪ್ರತಿಭಟನೆ, ರ್ಯಾನ್ ಇಂಟರ್ನ್ಯಾಷನಲ್ ಸ್ಕೂಲ್ನಲ್ಲಿ ಆರು ವರ್ಷದ ವಿದ್ಯಾರ್ಥಿಯ ಸಾವು ಮುಂತಾದ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು.
ಚಳಿಗಾಲದ ವೇಳೆ ಕೆಮ್ಮು ಸಮಸ್ಯೆ ಉಲ್ಬಣಿಸಿದ ಕಾರಣ ಜ.27ರಂದು ಬೆಂಗಳೂರಿಗೆ ಆಗಮಿಸಿದ್ದ ಕೇಜ್ರಿವಾಲ್ 10 ದಿನಗ ಚಿಕಿತ್ಸೆ ಪಡೆದುಕೊಂಡಿದ್ದರು. ಅವರ ಗೈರು ಹಾಜರಾತಿಯಲ್ಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಆಡಳಿತದ ಜವಾಬ್ದಾರಿ ವಹಿಸಿಕೊಂಡಿದ್ದರು.
ಮುನ್ಸಿಪಲ್ ಕಾರ್ಪೋರೇಶನ್ನಲ್ಲಿ ಸ್ವಚ್ಛತಾ ಕೆಲಸಗಾರರು, ವೈದ್ಯರು, ಶಿಕ್ಷಕರು ಸಂಬಳ ದೊರಕದ ಹಿನ್ನಲೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಅದನ್ನು ಬಗೆಹರಿಸುವ ಸವಾಲು ಕೇಜ್ರಿವಾಲ್ ಮುಂದಿದೆ. ಆರು ವರ್ಷದ ವಿದ್ಯಾರ್ಥಿ ಸಾವು ಪ್ರಕರಣವೂ ದೆಹಲಿಯಲ್ಲಿ ದೊಡ್ಡ ಗಲಾಟೆಯನ್ನು ಸೃಷ್ಟಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.