ನವದೆಹಲಿ: ಬಜೆಟ್ ಅಧಿವೇಶನದ ಹಿನ್ನಲೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅವರು ಸೋಮವಾರ ಬಿಜೆಪಿ ಮೈತ್ರಿ ಪಕ್ಷಗಳ ಸಭೆ ನಡೆಸಿದರು. ಸಂಸತ್ತಿನಲ್ಲಿ ಉತ್ತಮ ಸಹಕಾರವನ್ನು ಹೊಂದುವ ಸಲುವಾಗಿ ಈ ಸಭೆ ನಡೆಸಲಾಗಿದೆ.
ಅಲ್ಲದೇ ಅವರು ಪ್ರತಿ ಪಕ್ಷಗಳೊಂದಿಗೂ ಪ್ರತ್ಯೇಕ ಸಭೆ ನಡೆಸಿ ಮಾತುಕತೆ ನಡೆಸಲಿದ್ದಾರೆ. ಮಂಗಳವಾರ ಅವರು ಅಕಾಲಿ ದಳ ಮತ್ತು ಟಿಡಿಪಿ ಪಕ್ಷಗಳೊಂದಿಗೆ ಸಭೆ ನಡೆಸಲಿದ್ದಾರೆ. ಅದೇ ರೀತಿ ಮುಂಬರುವ ದಿನಗಳಲ್ಲಿ ಬೇರೆ ಪಕ್ಷಗಳೊಂದಿಗೂ ಸಭೆ ನಡೆಸಲಿದ್ದಾರೆ.
ಫೆ.23ರಿಂದ ಬಜೆಟ್ ಅಧಿವೇಶನ ಆರಂಭವಾಗುತ್ತಿದ್ದು, ಬಿಜೆಪಿ ಮತ್ತು ಮೈತ್ರಿ ಪಕ್ಷಗಳ ನಡುವೆ ಸಮನ್ವಯದ ಕೊರತೆ ಇದೆ ಎಂಬ ದೂರನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಈ ಸಭೆಯನ್ನು ನಡೆಸಲಾಗುತ್ತಿದೆ. ಅಕಾಲಿ ದಳ ಮತ್ತು ಶಿವಸೇನೆ ಮೈತ್ರಿಯೊಳಗೆ ಸಮನಯ್ವದ ಕೊರತೆಯಿದೆ ಎಂದು ದೂರಿದ್ದವು.
ಎನ್ಡಿಎ ಮೈತ್ರಿಯ 9 ಪಕ್ಷಗಳ ನಾಯಕರು ವಿವಿಧ ವಿಷಯಗಳ ಬಗ್ಗೆ ಪರಸ್ಪರ ಮಾತುಕತೆ ನಡೆಸಲಿದ್ದೇವೆ ಎಂದು ಬಿಜೆಪಿ ಮುಖಂಡ ವೆಂಕಯ್ಯ ನಾಯ್ಡು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.