ನವದೆಹಲಿ : ಸಿಯಾಚಿನ್ ಹಿಮಪಾತದಲ್ಲಿ ಸಿಲುಕಿ 6 ದಿನಗಳ ಬಳಿಕ ಅದೃಷ್ಟವಶಾತ್ ಸಾವಿನ ದವಡೆಯಿಂದ ಪಾರಾಗಿ ಬದುಕುಳಿದಿರುವ ಕರ್ನಾಟಕದ ಯೋಧ ಹನುಮಂತಪ್ಪ ಕೊಪ್ಪದ್ ಅವರನ್ನು ದೆಹಲಿಯ ಕಂಟೋನ್ಮೆಂಟ್ನಲ್ಲಿರುವ ಆರ್ ಆರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹನುಮಂತಪ್ಪ ಕೊಪ್ಪದ್ ಅವರ ಆರೋಗ್ಯ ವಿಚಾರಿಸಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಸೇನಾ ಮುಖ್ಯಸ್ಥರು ಆಸ್ಪತ್ರೆಗೆ ಇಂದು ಭೇಟಿ ನೀಡಿದರು.
ಆಸ್ಪತ್ರೆಗೆ ಭೇಟಿ ನೀಡಿದ ಮೋದಿಯವರು ಹನುಮಂತಪ್ಪನವರ ಧೈರ್ಯ ಬಣ್ಣಿಸಲು ಅಸಾಧ್ಯ. ಇವರು ನಿಜಕ್ಕೂ ಕೆಚ್ಚೆದಯ ವೀರ ಎಂದು ಬಣ್ಣಿಸಿದ್ದಾರೆ.
ಹನುಮಂತಪ್ಪನವರಿಗೆ ಚಿಕಿತ್ಸೆ ನೀಡುತ್ತಿರುವ ಡಾಕ್ಟರ್ಗಳೊಂದಿಗೆ ಮಾತನಾಡಿ, ಆರೋಗ್ಯ ಸ್ಥಿತಿಯ ಬಗ್ಗೆ ವಿಚಾರಿಸಿದರು.
25 ಅಡಿ ಆಳದ ಹಿಮದ ರಾಶಿಯಡಿ ಯೋಧ ಹನುಮಂತಪ್ಪ ಸಿಕ್ಕಿದ್ದು, 6 ದಿನಗಳಿಂದ ಕೊರೆಯುವ ಹಿಮದಲ್ಲಿ ಬಹಳಷ್ಟು ನಿತ್ರಾಣಗೊಂಡಿದ್ದರು. ಅವರ ಹೃದಯ ಬಡಿತವೂ ಕ್ಷೀಣವಾಗಿತ್ತು. ಆ ಕೂಡಲೇ ಅವರನ್ನು ಹೆಲಿಕಾಪ್ಟರ್ ಮೂಲಕ ದೆಹಲಿಯ ಆರ್. ಆರ್. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಆಸ್ಪತ್ರೆಯ ಡಾಕ್ಟರ್ಗಳ ಪ್ರಕಾರ, ಯೋಧ ಹನುಮಂತಪ್ಪ ಕೊಪ್ಪದ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ತಮ್ಮೆಲ್ಲಾ ಪ್ರಯತ್ನಗಳನ್ನು ಮುಂದುವರೆಸಿದ್ದು, ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.