ನವದೆಹಲಿ: ವಿಸ್ಮಯ ಎಂಬಂತೆ 25 ಅಡಿ ಆಳದ ಸಿಯಾಚಿನ್ ಹಿಮಪಾತದಿಂದ ಜೀವಂತವಾಗಿ ಎದ್ದು ಬಂದ ಕನ್ನಡದ ವೀರ ಯೋಧ ಹನುಮಂತಪ್ಪ ಕೊಪ್ಪದ್ ಅವರ ಸ್ಥಿತಿ ಗಂಭೀರವಾಗಿದ್ದು, ದೆಹಲಿಯ ಆರ್ಮಿ ರಿಸರ್ಚ್ ಆಂಡ್ ರಿಫ್ರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಯೋಧ ನ್ಯುಮೋನಿಯಾದಿಂದ ಬಳಲುತ್ತಿದ್ದಾರೆ. ಅಷ್ಟೇ ಅಲ್ಲದೇ ಅವರ ಕಿಡ್ನಿ ಮತ್ತು ಲಿವರ್ ಕಾರ್ಯವನ್ನು ಸ್ಥಗಿತಗೊಳಿಸಿದೆ. ಕಡಿಮೆ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ. ಆದರೆ ಅದೃಷ್ಟವಶಾತ್ ಶೀತ ಸಂಬಂಧಿ ಕಾಯಿಲೆ ಅಥವಾ ಗಾಯಗಳು ಅವರಿಗೆ ಆಗಿಲ್ಲ ಎಂದು ವೈದ್ಯರು ಹೇಳಿದ್ದಾರೆ.
ವಿವಿಧ ತಜ್ಞ ವೈದ್ಯರು ಅವರ ಆರೋಗ್ಯ ಸ್ಥಿತಿಯನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಅವರ ರಕ್ತದೊತ್ತಡವನ್ನು ಸಹಜ ಸ್ಥಿತಿಗೆ ತರಲು ಹರಸಾಹಸ ಮಾಡಲಾಗುತ್ತಿದೆ ಎನ್ನಲಾಗಿದೆ.
ಪ್ರಕೃತಿ ವಿಕೋಪಕ್ಕೇ ಸೆಡ್ಡು ಹೊಡೆದು ಬಂದ ಆ ವೀರ ಯೋಧ ಬದುಕುಳಿಯಲಿ ಎಂದು ಸಮಸ್ತ ಭಾರತೀಯರು ಪ್ರಾರ್ಥನೆ ಮಾಡುತ್ತಿದ್ದಾರೆ. ಅವರ ಹುಟ್ಟೂರಿನಲ್ಲೂ ಪೂಜೆ ಪುನಸ್ಕಾರಗಳನ್ನು ನಡೆಸಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.