ಚೆನ್ನೈ: ನೇತಾಜೀ ಸುಭಾಷ್ ಚಂದ್ರ ಬೋಸ್ ಅವರಿಗೆ ಭಾರತ ರತ್ನ ಪುರಸ್ಕಾರ ನೀಡುವ ಬಗ್ಗೆ ಸಲ್ಲಿಸಲಾದ ಅರ್ಜಿಯ ಬಗ್ಗೆ ಪರಿಗಣಿಸುವಂತೆ ಮದ್ರಾಸ್ ಹೈಕೋರ್ಟ್ ಕೇಂದ್ರ ಗೃಹಸಚಿವಾಲಯಕ್ಕೆ ಸೂಚನೆ ನೀಡಿದೆ.
ಕೆಕೆ ರಮೇಶ್ ಎಂಬುವವರು ನೇತಾಜಿಗೆ ಮರಣೋತ್ತರ ಭಾರತ ರತ್ನ ನೀಡಿ ಪುರಸ್ಕರಿಸುವಂತೆ ಮದ್ರಾಸ್ ಹೈಕೋರ್ಟ್ಗೆ ಅರ್ಜಿ ಹಾಕಿದ್ದರು. ಇದನ್ನು ನ್ಯಾಯಾಲಯ ಪುರಸ್ಕರಿಸಿದೆ.
ಅಲ್ಲದೇ ಅವರ ಜನ್ಮ ದಿನವಾದ ಜ. 23ರಂದು ಸಾರ್ವಜನಿಕ ರಜೆ ಘೋಷಿಸುವಂತೆ ಅರ್ಜಿದಾರ ಕೇಳಿಕೊಂಡಿದ್ದರು. ಆದರೆ ಅವರ ಈ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.
ಭಾರತೀಯ ಪ್ರಜೆಗಳು ನೇತಾಜಿ ಅವರನ್ನು ಸನ್ಮಾನಿಸ ಬಯಸುತ್ತಾರೆ, ಅವರ ತ್ಯಾಗವನ್ನು ಯಾರೊಬ್ಬರೂ ಮರೆಯಲು ಸಾಧ್ಯವಿಲ್ಲ ಎಂದು ರಮೇಶ್ ಅಭಿಪ್ರಾಯಪಟ್ಟಿದ್ದಾರೆ.
’ನೇತಾಜಿಗೆ ಭಾರತ ರತ್ನ ನೀಡುವ ವಿಷಯವನ್ನು ಕೇಂದ್ರ ಗೃಹಸಚಿವಾಲಯ ಮಾತ್ರ ಪರಿಗಣನೆಗೆ ತೆಗೆದುಕೊಳ್ಳಲು ಸಾಧ್ಯ. ಈ ವಿಷಯವನ್ನು ನಾವು ತೆಗೆದುಕೊಳ್ಳಲು ಸಾಧ್ಯವಿಲ್ಲ’ ಎಂದು ನ್ಯಾಯಪೀಠ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.