ಇಂದೋರ್: ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ಅವರು ಶುಕ್ರವಾರ ಮಹತ್ವಾಕಾಂಕ್ಷಿ ’ಸ್ಮಾರ್ಟ್ ಸಿಟಿ’ ಯೋಜನೆಯನ್ನು ಔಪಚಾರಿಕವಾಗಿ ಬಿಡುಗಡೆ ಮಾಡಲಿದ್ದಾರೆ.
ಲೋಕ ಸಭಾ ಸ್ಪೀಕರ್ ಹಾಗೂ ಸ್ಥಳೀಯ ಎಂಪಿ ಆಗಿರುವ ಸುಮಿತ್ರಾ ಮಹಾಜನ್, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
’ಸ್ಮಾರ್ಟ್ ಸಿಟಿ’ಯು ಇಂದೋರ್ನ ರಾಜ್ವಾಡ ಅರಮನೆ ಪ್ರದೇಶದ 50೦ ಎಕರೆ ಪ್ರದೇಶ ಹಾಗೂ ಎಂಒಜಿ ಲೈನ್ಸ್ ಪ್ರದೇಶದ 64 ಎಕರೆ ಪ್ರದೇಶದಲ್ಲಿ ಅಂದಾಜು 5000 ಕೋಟಿ ರೂಪಾಯಿ ವೆಚ್ಚದಲ್ಲಿ ಆಧುನಿಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.