ಬರ್ಲಿನ್: ಭಯೋತ್ಪಾದನೆ ಮತ್ತು ಭಯೋತ್ಪಾದನೆಗೆ ಸಹಕಾರ ನೀಡುವವರ ವಿರುದ್ಧ ಕಠಿಣ ನಿಲುವು ತಾಳಬೇಕಾಗಿದೆ, ಭಯೋತ್ಪಾದನೆ ಎಂಬುದು ಮಾನವೀಯತೆಗೆ ದೊಡ್ಡ ಅಪಾಯಕಾರಿಯಾಗಿದೆ. ಇದರ ವಿರುದ್ಧ ಮಾನವತಾವಾದಿಗಳು ಒಗ್ಗಟ್ಟಿನ ಹೋರಾಟ ನಡೆಸಬೇಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಜರ್ಮನ್ ಪ್ರವಾಸದ ಕೊನೆಯ ದಿನವಾದ ಮಂಗಳವಾರ ಮೋದಿ ಮತ್ತು ಜರ್ಮನ್ ಚಾನ್ಸ್ಲರ್ ಅಂಜೇಲಾ ಮಾರ್ಕೆಲಾ ಅವರು ಜಂಟಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
‘ವಿಶ್ವದ ಅತಿದೊಡ್ಡ ಉತ್ಪಾದನ ವಲಯವಾಗುವ ಸಾಮರ್ಥ್ಯ ಭಾರತಕ್ಕಿದೆ. ಜನಸಂಖ್ಯಾ ಬಲ, ಪ್ರಜಾಪ್ರಭುತ್ವ ಮತ್ತು ಬೇಡಿಕೆ ಈ ಮೂರು ನಮ್ಮಲ್ಲಿದೆ. ಜಗತ್ತು ಇಂದು ಭಾರದತ್ತ ನೋಡುತ್ತಿದೆ. ಜರ್ಮನಿ ಮತ್ತು ಭಾರತ ಪರಸ್ಪರ ಸಹಕಾರದಿಂದ ಕಾರ್ಯನಿರ್ವಹಿಸುತ್ತವೆ ಎಂಬ ನಂಬಿಕೆಯೊಂದಿಗೆ ಜರ್ಮನಿಯನ್ನು ನಾನಿಂದು ತೊರೆಯುತ್ತೇನೆ’ ಎಂದರು.
ಹವಮಾನ ಬದಲಾವಣೆಯ ವಿಷಯದಲ್ಲೂ ಉಭಯ ದೇಶಗಳು ಒಟ್ಟಾಗಿ ಶ್ರಮವಹಿಸಲಿವೆ. ಪ್ರವಾಸದ ವೇಳೆ ಜಾಗತಿಕ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದ್ದೇವೆ. ಜರ್ಮನ್ ಕಂಪನಿಗಳು ಭಾರತದಲ್ಲಿ ಹೂಡಿಕೆ ಮಾಡುವ ಭರವಸೆ ಇದೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.