ಲಕ್ನೋ: ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ತಮ್ಮ ಉತ್ತರ ಪತ್ರಿಕೆಯಲ್ಲಿ ‘ಓಂ’ ಅಥವಾ ‘786’ ಅಂತ ಬರೆದರೆ ಅವರನ್ನು ಪರೀಕ್ಷೆಯಿಂದ ಡಿಬಾರ್ ಮಾಡಲಾಗುವುದು ಎಂಬ ಆದೇಶವನ್ನು ಉತ್ತರ ಪ್ರದೇಶ ಪರೀಕ್ಷಾ ಮಂಡಳಿ ಹೊರಡಿಸಿದೆ.
ಹೈಸ್ಕೂಲು ಮತ್ತು ಪಿಯುಸಿ ವಿದ್ಯಾರ್ಥಿಗಳು ಬರೆಯುವ ಉತ್ತರ ಪತ್ರಿಕೆಯಲ್ಲಿ ‘ಓಂ’ ಅಥವಾ ‘786’ ಈ ರೀತಿ ಶಬ್ದಗಳು ಕಂಡು ಬಂದಲ್ಲಿ ಅವರನ್ನು ಡಿಬಾರ್ ಮಾಡಲಾಗುವುದು ಎಂದು ತಿಳಿಸಿದೆ.
ಪರೀಕ್ಷಾ ಪ್ರಕ್ರಿಯೆಯಲ್ಲಿ ಧರ್ಮವನ್ನು ಹೊರಗಿಡಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದೆ. ಮೌಲ್ಯ ಮಾಪಕರಿಗೆ ವಿದ್ಯಾರ್ಥಿಗಳು ಯಾವ ಧರ್ಮಕ್ಕೆ ಸೇರಿದವರು ಎನ್ನುವುದು ಗೊತ್ತಾಗದಿರಲಿ, ವಿದ್ಯಾರ್ಥಿಗಳ ಮೌಲ್ಯಮಾಪದನದ ಮೇಲೆ ಧರ್ಮದ ಪ್ರಭಾವ ಬೀರದಿರುವುದು ಒಳ್ಳೆಯದು ಎಂಬ ಕಾರಣಕ್ಕೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಒಂದು ವೇಳೆ ನಿಯಮವನ್ನು ಉಲ್ಲಂಘಿಸಿಯೂ ಬರೆದರೆ ಅಂತಹ ವಿದ್ಯಾರ್ಥಿಗಳನ್ನು ಅನರ್ಹಗೊಳಿಸಲಾಗುವುದು ಎಂದು ಪರೀಕ್ಷಾ ಮಂಡಳಿ ತಿಳಿಸಿದೆ.
ಪರೀಕ್ಷೆಯಲ್ಲಿ ಭಯದಿಂದ ಅಥವಾ ಶುಭ ಸೂಚಕವಾದ ಶಬ್ದಗಳನ್ನು ಬರೆಯುವ ಹವ್ಯಾಸ ಎಷ್ಟೋ ವಿದ್ಯಾರ್ಥಿಗಳಿಗಿರುತ್ತದೆ. ಅದನ್ನು ಬರೆದ ನಂತರವೇ ಉತ್ತರ ಬರೆಯಲು ಪ್ರಾರಂಭಿಸುತ್ತಾರೆ. ಆದರೆ ಇನ್ನು ಈ ಶುಭಸೂಚಕ ಶಬ್ದಗಳೇ ಅವರಿಗೆ ಕಂಟಕವಾಗಲೂ ಬಹುದು !
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.