ನವದೆಹಲಿ: ದೆಹಲಿಯ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯ ಇದೀಗ ಯುದ್ಧ ಭೂಮಿಯಾಗಿ ಪರಿವರ್ತನೆಗೊಳ್ಳುತ್ತಿದ್ದು, ಅಲ್ಲಿ ನಡೆಯುತ್ತಿರುವ ವಿವಾದಗಳಿಗೆ ಕೊನೆಯೇ ಇಲ್ಲದಂತಾಗಿದೆ.
ನೇಣಿಗೇರಲ್ಪಟ್ಟ 2001ರ ಸಂಸತ್ತು ದಾಳಿ ಆರೋಪಿ ಅಫ್ಜಲ್ ಗುರು ವಿವಾದಕ್ಕೆ ಸಂಬಂಧಿಸಿದಂತೆ ದೇಶದ್ರೋಹಿ ಚಟುವಟಿಕೆಗಳು ಆ ವಿಶ್ವವಿದ್ಯಾನಿಲಯದಲ್ಲಿ ಹೆಚ್ಚುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ.
ಇದೀಗ ವಿದ್ಯಾರ್ಥಿಗಳ ವಿರುದ್ಧ ಸಿಡಿದೆದ್ದಿರುವ ಮಾಜಿ ಸೈನಿಕರು ವಿಶ್ವವಿದ್ಯಾನಿಲಯದಲ್ಲಿ ಭಾರತ ವಿರೋಧಿ ಕೃತ್ಯಗಳು ಮುಂದುವರೆದರೆ ಆ ವಿಶ್ವವಿದ್ಯಾನಿಲಯದಿಂದ ಪಡೆದ ಪದವಿಗಳನ್ನು ಹಿಂದಿರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ನಮಗೆ ಈ ವಿಶ್ವವಿದ್ಯಾನಿಲಯದೊಂದಿಗೆ ಸಂಬಂಧ ಹೊಂದುವುದು ನಮಗೆ ಕಷ್ಟಕರವಾಗಿದೆ ಎಂದು ಕುಲಪತಿಗಳಿಗೆ ಪತ್ರ ಮುಖೇನ ಸ್ಪಷ್ಟವಾಗಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.