ಮುಂಬಯಿ: ಮಹಾರಾಷ್ಟ್ರದಲ್ಲಿ ಪ್ರಸ್ತುತ ನಡೆಯುತ್ತಿರುವ ’ಮೇಕ್ ಇನ್ ಇಂಡಿಯಾ’ ವೀಕ್ ಕಾರ್ಯಕ್ರಮದಲ್ಲಿ ಭಾನುವಾರ ಬೆಂಕಿ ಅವಘಢ ಸಂಭವಿಸಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.
ಘಟನೆ ನಡೆಯುವ ವೇಳೆ ಸ್ಥಳದಲ್ಲಿ ಗಣ್ಯರ ನಿಯೋಗ, ರಾಜಕಾರಣಿಗಳು, ಹೂಡಿಕೆದಾರರು, ನಟರು ಇದ್ದರು. ಅವರನ್ನೆಲ್ಲಾ ಸುರಕ್ಷಿತವಾಗಿ ಸ್ಥಳದಿಂದ ಹೊರಕ್ಕೆ ಕರೆತರಲಾಗಿದೆ.
ಘಟನೆಯಲ್ಲಿ ಯಾವುದೇ ಹಾನಿ ಸಂಭವಿಸಿಲ್ಲ, ಸಾಂಸ್ಕೃತಿ ಕಾರ್ಯಕ್ರಮ ನಡೆಯುತ್ತಿದ್ದ ವೇಳೇ ಶಾರ್ಟ್ ಸರ್ಕ್ಯೂಟ್ನಿಂದ ಅವಘಢ ಸಂಭವಿಸಿದೆ ಎನ್ನಲಾಗಿದೆ.
ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಅವರ ಪತ್ನಿ, ಶೀವಸೇನಾ ಮುಖಂಡ ಉದ್ಧವ್ ಠಾಕ್ರೆ, ಅಮಿತಾಭ್ ಬಚ್ಚನ್, ಅಮಿರ್ ಖಾನ್, ಗವರ್ನರ್ ವಿದ್ಯಾಸಾಗರ್ ರವ್ ಈ ವೇಳೆ ಸ್ಥಳದಲ್ಲಿದ್ದರು. ಇವರೆನ್ನೆಲ್ಲಾ ತಕ್ಷಣವೇ ಬೇರೆಡೆ ಸ್ಥಳಾಂತರ ಮಾಡಲಾಗಿದೆ.
ಈ ಘಟನೆಯಿಂದ ಮೇಕ್ ಇನ್ ಇಂಡಿಯಾ ಕಾರ್ಯಕ್ರಮದ ಇತರ ಕಾರ್ಯಕ್ರಮಗಳಿಗೆ ಯಾವುದೇ ಅಡ್ಡಿಯಿಲ್ಲ ಎಂದು ಫಡ್ನವಿಸ್ ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ಘಟನೆ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.