ನವದೆಹಲಿ: ದೆಹಲಿಯ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾನಿಲಯದಲ್ಲಿ ನಡೆಯುತ್ತಿರುವ ದೇಶದ್ರೋಹದ ಚಟುವಟಿಕೆಯ ವಿವಾದಗಳು ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.
ಜೆಎನ್ಯು ಆವರಣದಲ್ಲಿ ಕೆಲ ವಿದ್ಯಾರ್ಥಿಗಳು ‘ಪಾಕಿಸ್ಥಾನ ಜಿಂದಾಬಾದ್’ ’ಭಾರತ್ ಬರ್ಬಾದ್’ ಎಂಬ ಘೋಷಣೆಗಳನ್ನು ಕೂಗುವ ವೀಡಿಯೋವೊಂದು ಸಿಕ್ಕಿದ್ದು ಭಾರೀ ಚರ್ಚೆಗೆ ಗ್ರಾಸವಾಗಿದೆ.
ಇನ್ನೊಂದೆಡೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರು, ಜೆನ್ಯುನಲ್ಲಿ ದೇಶದ್ರೋಹಿ ಘೋಷಣೆ ಕೂಗಿದವರಿಗೆ ಉಗ್ರ ಹಫೀಜ್ ಸಯೀದ್ನ ಬೆಂಬಲವಿರುವ ಬಗ್ಗೆ ಗುಮಾನಿ ವ್ಯಕ್ತಪಡಿಸಿದ್ದಾರೆ. ಅಲ್ಲದೇ ದೇಶದ್ರೋಹ ಚಟುವಟಿಕೆಯಲ್ಲಿ ತೊಡಗಿರುವವರನ್ನು ಯಾವುದೇ ಕಾರಣಕ್ಕೂ ಕ್ಷಮಿಸೋದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಜೆಎನ್ಯು ವಿದ್ಯಾರ್ಥಿಗಳಿಗೆ ಯಾವುದಾದರು ಉಗ್ರ ಸಂಪರ್ಕವಿದೆಯೇ ಎಂಬ ಬಗ್ಗೆ ತನಿಖೆ ನಡೆಸುವುದಾಗಿ ದೆಹಲಿ ಪೊಲೀಸ್ ಕಮಿಷನರ್ ಹೇಳಿದ್ದಾರೆ. ಅಲ್ಲದೇ ದೆಹಲಿ ಪೊಲೀಸ್ ಇಲಾಖೆ ಪ್ರಕರಣವನ್ನು ಭಯೋತ್ಪಾದನಾ ವಿರೋಧಿ ದಳದ ವಿಶೇಷ ತಂಡಕ್ಕೆ ವರ್ಗಾಯಿಸಲು ಬಯಸಿದೆ.
ಇನ್ನೊಂದೆಡೆ ದೇಶದ ವಿರುದ್ಧ ಘೋಷಣೆ ಕೂಗಿದವರನ್ನು ಸಮರ್ಥಿಸಿಕೊಳ್ಳುತ್ತಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಮುಖಂಡ ಮುಕ್ತಾರ್ ಅಬ್ಬಾಸ್ ನಖ್ವಿ ಕಿಡಿಕಾರಿದ್ದು, ರಾಹುಲ್ ಅವರು ಎಐಸಿಸಿ ಕಛೇರಿ ಮುಂದೆ ಪ್ರತ್ಯೇಕತಾವಾದಿಗಳ ಮತ್ತು ಉಗ್ರರ ಪ್ರತಿಮೆಯನ್ನು ನಿರ್ಮಿಸಲಿ ಎಂದು ಸಲಹೆ ನೀಡಿದ್ದಾರೆ.
ಇನ್ನೊಂದೆಡೆ ದೇಶದ್ರೋಹಿ ವಿದ್ಯಾರ್ಥಿ ಮುಖಂಡ ಕನಯ್ಯ ಕುಮಾರ್ ಅರೆಸ್ಟ್ ಆದ ಬಳಿಕ ಆತನಿಗೆ ಬೆಂಬಲ ಸೂಚಿಸಲು ಕಾಂಗ್ರೆಸ್, ಸಿಪಿಎಂನ ಆನೇಕ ಮುಖಂಡರು ಜೆಎನ್ಯುಗೆ ತೆರಳಿದ್ದಾರೆ.
ರಾಹುಲ್ ಗಾಂಧಿ ತೆರಳಿದಾಗ ಎಬಿವಿಪಿ ಸದಸ್ಯರು ಕಪ್ಪು ಬಾವುಟ ಪ್ರದರ್ಶಿಸಿ ’ರಾಹುಲ್ ಗೋ ಬ್ಯಾಕ್’ ಘೋಷಣೆಯನ್ನು ಕೂಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.