ನವದೆಹಲಿ: ಪಕ್ಷದ ಎಚ್ಚರಿಕೆಯನ್ನೂ ಮೀರಿ ನಿನ್ನೆ ‘ಸ್ವರಾಜ್ ಸಂವಾದ’ ಸಭೆಯನ್ನು ಏರ್ಪಡಿಸಿದ ತನ್ನ ಪಕ್ಷದ ಬಂಡಾಯ ನಾಯಕರಾದ ಪ್ರಶಾಂತ್ ಭೂಷಣ್ ಮತ್ತು ಯೋಗೇಂದ್ರ ಯಾದವ್ ಅವರ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳಲು ಎಎಪಿ ನಿರ್ಧರಿಸಿದೆ.
ಬುಧವಾರ ಸಭೆ ಸೇರಲಿರುವ ಎಎಪಿಯ ರಾಜಕೀಯ ವ್ಯವಹಾರಗಳ ಸಮಿತಿ ಈ ಇಬ್ಬರು ನಾಯಕರ ವಿರುದ್ಧ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ನಿರ್ಧಾರಕೈಗೊಳ್ಳಲಿದೆ ಎಂದು ಹೇಳಲಾಗಿದೆ.
ಸಿಎಂ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ಇಂದು ಸಂಜೆ ರಾಜಕೀಯ ವ್ಯವಹಾ ರಗಳ ಸಮಿತಿ ಸಭೆ ನಡೆಯಲಿದೆ. ವಿಶೇಷವೆಂದರೆ ಇಂದು ಸಂಜೆ 4 ಗಂಟೆಗೆ ಭೂಷಣ್ ಮತ್ತು ಯಾದವ್ ಅವರು ಪತ್ರಿಕಾಗೋಷ್ಠಿಯನ್ನೂ ನಡೆಸಲಿದ್ದಾರೆ.
ಪಕ್ಷದ ಎಚ್ಚರಿಕೆಯ ನಡುವೆಯೂ ಇವರು ಸ್ವರಾಜ್ ಸಂವಾದ್ ಎಂಬ ಸಭೆಯನ್ನು ಆಯೋಜನೆ ಮಾಡಿದ್ದರು. ಇದರಲ್ಲಿ ಹಲವು ರಾಜ್ಯಗಳ ಎಎಪಿ ಮುಖ್ಯಸ್ಥರುಗಳು ಭಾಗವಹಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.