ನವದೆಹಲಿ: ಎಲ್ಲಾ ಯೋಜನೆಗಳನ್ನು ಅವಧಿಯೊಳಗೆ ಪೂರ್ಣಗೊಳಿಸಿ ಮತ್ತು ಸರ್ಕಾರದ ಸಧನೆಗಳ ಬಗ್ಗೆ ಹೆಚ್ಚಿನ ಪ್ರಚಾರ ನೀಡಿ ಎಂದು ಪ್ರಧಾನಿ ನರೇಂದ್ರ ಮೋದಿ ತನ್ನ ಸಂಪುಟ ಸಹೋದ್ಯೋಗಿಗಳಿಗೆ ಸಲಹೆ ನೀಡಿದ್ದಾರೆ.
ಬುಧವಾರ ಸಂಜೆ ಸಂಪುಟ ಸಚಿವರನ್ನು ಉದ್ದೇಶಿಸಿ ಮಾತನಾಡಿದ ಅವರು, ಸಾಮಾಜಿಕ ವಲಯ ಕಾರ್ಯಗಳಿಗೆ ಡೆಡ್ಲೈನ್ ಎಂಬುದು ಅತ್ಯಗತ್ಯ, ಈ ಡೆಡ್ಲೈನ್ನ್ನು ಯಾವುದೇ ಕಾರಣಕ್ಕೂ ಮಿಸ್ ಮಾಡಿಕೊಳ್ಳಬಾರದು. ಸರ್ಕಾರ ಯೋಜನೆಗಳನ್ನು ಘೋಷಿಸಿದಾಗ ಜನರ ನಿರೀಕ್ಷೆಗಳು ಹೆಚ್ಚಾಗುತ್ತದೆ ಎಂದರು.
‘ಜನರು ಅಂತ್ಯದ ಫಲಿತಾಂಶದ ಮೇಲೆ ಗಮನವಿಟ್ಟಿರುತ್ತಾರೆ. ಜನರ ನಿರೀಕ್ಷೆಯ ಮಟ್ಟ ತಲುಪಲು ನಾವು ಡೆಡ್ಲೈನ್ಗಳನ್ನು ಮಿಸ್ ಮಾಡಬಾರದು’ ಎಂದು ಸಚಿವರಿಗೆ ಸಲಹೆ ನೀಡಿದ್ದಾರೆ.
ಅಲ್ಲದೇ ನಿಮ್ಮ ಸಾಧನೆಗಳು ನನಗೆಯೇ ತಿಳಿದಿಲ್ಲ ಎಂದಾದ ಮೇಲೆ ಸಾಮಾನ್ಯ ಜನರಿಗೆ ತಿಳಿಯಲು ಸಾಧ್ಯವೇ ಎಂದು ಸಚಿವರನ್ನು ಪ್ರಶ್ನಿಸಿದ ಮೋದಿ, ವಿವಿಧ ಯೋಜನೆಗಳ ಪ್ರಗತಿಯ ಬಗ್ಗೆ ವರದಿಯನ್ನು ಪಡೆದುಕೊಂಡರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.