ನವದೆಹಲಿ: ಹಿರಿಯ ಐಪಿಎಸ್ ಅಧಿಕಾರಿಯಾಗಿರುವ ಅಲೋಕ್ ವರ್ಮಾ ಅವರು ದೆಹಲಿಯ ಮುಂದಿನ ಪೊಲೀಸ್ ಕಮಿಷನರ್ ಆಗಿ ನೇಮಕಗೊಳ್ಳಲಿದ್ದಾರೆ ಎಂದು ವರದಿಗಳು ತಿಳಿಸಿವೆ.
ಪ್ರಸ್ತುತ ವರ್ಮಾ ಅವರು ದೆಹಲಿ ಬಂಧೀಖಾನೆಯ ಪ್ರಧಾನ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕಮಿಷನರ್ ಆಗಿ ಅವರು ಮಾರ್ಚ್ 1 ರಂದು ಅಧಿಕಾರ ಸ್ವೀಕರಿಸುವ ಸಾಧ್ಯತೆ ಇದೆ.
ಪ್ರಸ್ತುತ ಕಮಿಷನರ್ ಆಗಿರುವ ಬಿಎಸ್ ಬಸ್ಸಿ ಅವರು ಈ ತಿಂಗಳ ಕೊನೆಗೆ ಪೊಲೀಸ್ ಸೇವೆಯಿಂದ ನಿವೃತ್ತರಾಗಲಿದ್ದು, ಬಳಿಕ ಮಾಹಿತಿ ಕಮಿಷನರ್ ಆಗುವ ಸಾಧ್ಯತೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.