ನವದೆಹಲಿ: ದೇಶದ ಎಲ್ಲಾ ಕೇಂದ್ರೀಯ ವಿಶ್ವವಿದ್ಯಾನಿಲಯಗಳಲ್ಲೂ ರಾಷ್ಟ್ರಧ್ವಜವನ್ನು ಹಾರಿಸಬೇಕು ಎಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಭಾರತದ ’ಬಲಿಷ್ಠತೆ ಮತ್ತು ಏಕತೆ’ಯ ಸಂಕೇತವಾಗಿ ಎಲ್ಲಾ ವಿಶ್ವವಿದ್ಯಾನಿಲಯಗಳು 207 ಅಡಿ ಎತ್ತರದ ರಾಷ್ಟ್ರಧ್ವಜವನ್ನು ತಮ್ಮ ಕ್ಯಾಂಪಸ್ನಲ್ಲಿ ಹಾರಿಸಬೇಕು’ ಎಂದು ಮಾನವ ಸಂಪನ್ಮೂಲ ಸಚಿವಾಲಯ ಆದೇಶ ಹೊರಡಿಸಿದೆ.
ಸೂರಜ್ಕುಂಡ್ನಲ್ಲಿ ವಿವಿಧ ವಿಶ್ವವಿದ್ಯಾನಿಲಯಗಳ ಉಪ ಕುಲಪತಿಗಳೊಂದಿಗೆ ಸಚಿವೆ ಸ್ಮೃತಿ ಇರಾನಿ ಸಭೆ ನಡೆಸಿದ ಬಳಿಕ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಈ ನಿಯಮ ಜವಹಾರ್ ಲಾಲ್ ನೆಹರೂ ವಿಶ್ವವಿದ್ಯಾನಿಲಯಕ್ಕೂ ಅನ್ವಯವಾಗಲಿದೆ, ಇದು ಕೂಡ ಕೇಂದ್ರದ ಅಧೀನದಲ್ಲಿದೆ.
ಜೆಎನ್ಯುನಲ್ಲಿ ನಡೆದ ದೇಶದ್ರೋಹ ಘಟನೆಯ ಬಳಿಕ ಸರ್ಕಾರ ಇಂತಹದೊಂದು ನಿಯಮವನ್ನು ಜಾರಿಗೊಳಿಸಲು ಮುಂದಾಗಿದೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.