ಕಠ್ಮಂಡು: ಭಾರತ ಮತ್ತು ನೇಪಾಳದ ಸಂಬಂಧವನ್ನು ಪುನರ್ ಸ್ಥಾಪಿಸುವ ಸಲುವಾಗಿ ನೇಪಾಳ ಪ್ರಧಾನಿ ಕೆಪಿ ಶರ್ಮಾ ಓಲಿ ಶುಕ್ರವಾರದಿಂದ ಆರು ದಿನಗಳ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ.
ತನ್ನ ಭೇಟಿಯಿಂದ ಉಭಯ ದೇಶಗಳ ನಡುವೆ ಇತ್ತೀಚಿಗೆ ಉದ್ಭವವಾಗಿರುವ ಭಿನ್ನಾಭಿಪ್ರಾಯಗಳು ದೂರವಾಗಲಿದೆ ಎಂಬ ವಿಶ್ವಾಸವನ್ನು ಓಲಿ ವ್ಯಕ್ತಪಡಿಸಿದ್ದಾರೆ.
ಅಲ್ಲದೇ ಯಾವುದೇ ನಿರ್ದಿಷ್ಟ ಅಜೆಂಡಾ ಅಥವಾ ಪ್ರಸ್ತಾವಣೆಯನ್ನು ಇಟ್ಟುಕೊಂಡು ಭಾರತಕ್ಕೆ ಭೇಟಿ ನೀಡುತ್ತಿಲ್ಲ ಎಂಬುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.
ನಮಗೆ ಭಾರತದ ಸ್ನೇಹ, ಸಹಕಾರ, ಪರಸ್ಪರ ಗೌರವ ಬೇಕಿದೆ, ಪುರಾತನ ಸಂಬಂಧವನ್ನು ಹಾಗೆಯೇ ಮುಂದುವರೆಸಿಕೊಂಡು ಹೋಗಲು ನಾವು ಬಯಸುತ್ತೇವೆ ಎಂದಿದ್ದಾರೆ.
ಮೂಲಗಳ ಪ್ರಕಾರ ಓಲಿ ಅವರು ಫೆ.20ರಂದು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಸಭೆ ನಡೆಸಲಿದ್ದಾರೆ. ರಾಷ್ಟ್ರಪತಿ, ಉಪರಾಷ್ಟ್ರಪತಿಯವರನ್ನೂ ಭೇಟಿಯಾಗಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.