ಬೆಂಗಳೂರು: ವಿನೂತನ ಬೈಕ್ ಆಂಬ್ಯುಲೆನ್ಸ್ ಸೇವೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬುಧವಾರ ಚಾಲನೆ ನೀಡಿದರು. ಏಷ್ಯಾದಲ್ಲೇ ಮೊಟ್ಟ ಮೊದಲ ಬಾರಿಗೆ ಈ ಸೇವೆಯನ್ನು ಪರಿಚಯಿಸಿದ್ದು ಕರ್ನಾಟಕದ ಹೆಮ್ಮೆ.
ಬೆಂಗಳೂರಿನಲ್ಲಿ ವಿಧಾನಸೌಧದ ಮುಂಭಾಗದಲ್ಲಿ ನಡೆದ ಸಮಾರಂಭದಲ್ಲಿ ಸೇವೆಗೆ ಚಾಲನೆ ನೀಡಲಾಯಿತು. ಅಪಘಾತಕ್ಕೀಡಾದವರಿಗೆ ತಕ್ಷಣ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ದಾಖಲಿಸುವ ಸದುದ್ದೇಶದೊಂದಿಗೆ ರಾಜ್ಯ ಸರ್ಕಾರ ಈ ಸೇವೆಯನ್ನು ಜಾರಿಗೊಳಿಸಿದೆ. ದಿನದ 24 ಗಂಟೆಯೂ ಸಾರ್ವಜನಿಕರಿಗೆ ಇದು ಲಭ್ಯವಾಗಲಿದೆ.
ಈ ಯೋಜನೆಗಾಗಿ ಅವೆಂಜರ್ ಬೈಕ್ಗಳನ್ನು ಬಳಸಲಾಗುತ್ತಿದೆ, ಈ ಬೈಕ್ನ ಬೆಲೆ 2 ಲಕ್ಷ ರೂಪಾಯಿ ಎನ್ನಲಾಗಿದೆ. ಸುಮಾರು ರೂ.174 ಲಕ್ಷ ವೆಚ್ಚದಲ್ಲಿ 30 ಬೈಕ್ ಆಂಬುಲೆನ್ಸ್ ಸಿದ್ಧವಾಗಿದ್ದು, 21 ಆಂಬುಲೆನ್ಸ್ಗಳು ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸಲಿವೆ.
ಈ ಸೇವೆಯನ್ನು 108 ಆರೋಗ್ಯ ಕವಚ ಅಡಿಯಲ್ಲೇ ಸೇರಿಸಲಾಗಿದೆ. ಈ ಸೇವೆಗಾಗಿ ಸಾರ್ವಜನಿಕರು108 ಸಂಖ್ಯೆಗೆಯೇ ಕರೆ ಮಾಡಬೇಕಾಗಿದೆ. ಕರೆ ಮಾಡಿದ ನಂತರ ವಾಹನ ದಟ್ಟಣೆ ಹೆಚ್ಚಿರುವ ಹಾಗೂ ನಾಲ್ಕು ಚಕ್ರದ ಆಂಬುಲೆನ್ಸ್ ತಲುಪಲು ಸಾಧ್ಯವಾಗದ ಸ್ಥಳಗಳಿಗೆ ಬೈಕ್ ಆಂಬ್ಯಲೆನ್ಸ್ನ್ನು ಕಳುಹಿಸಿ ಕೊಡಲಾಗುತ್ತದೆ.
ಪ್ಲಾಟಿನಂ ಮಿನಿಟ್ ಯೋಜನೆ ಎಂಬ ಹೆಸರಿನಲ್ಲಿ ಈ ಯೋಜನೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಾರಿಗೆ ತರುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.